ನವದೆಹಲಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್ಟಿಎ) ಶುಕ್ರವಾರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) 2021 ಪರೀಕ್ಷೆಯ ದಿನಾಂಕವನ್ನು ಘೋಷಣೆ ಮಾಡಿದೆ. ಆಗಸ್ಟ್ 1 ರಿಂದ ನೀಟ್ 2021 ಪರೀಕ್ಷೆ ನಡೆಯಲಿದೆ.
“ನೀಟ್ 2021 ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ಪೆನ್ ಮತ್ತು ಪೇಪರ್ ಮೋಡ್ ಮೂಲಕ ನಡೆಸಲಾಗುತ್ತದೆ. ಸಂಬಂಧಿತ ನಿಯಮಾವಳಿಗಳು, ಮಾರ್ಗಸೂಚಿಗಳು ಮತ್ತು ನಿಬಂಧನೆಗಳ ಪ್ರಕಾರ ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಬಿಎಸ್ಎಂಎಸ್, ಬಿಯುಎಂಎಸ್ ಮತ್ತು ಬಿಎಚ್ಎಂಎಸ್ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ 2021 ರ ನೀಟ್ (ಯುಜಿ) ನಡೆಸಲಿದೆ” ಅಧಿಸೂಚನೆ ಹೊರಡಿಸಲಾಗಿದೆ.
ಇದಕ್ಕೂ ಮೊದಲು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಅವರು ನೀಟ್ 2021 ಅನ್ನು ರದ್ದುಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಎನ್ಟಿಎ ಕೂಡ ಎರಡು ಬಾರಿ ಪರೀಕ್ಷೆ ನಡೆಸುವ ಯಾವುದೇ ಅವಕಾಶವನ್ನು ರದ್ದುಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಹಿಂದಿನ ವರ್ಷಗಳಂತೆ ಯುಜಿ ನೀಟ್ 2021 ಪರೀಕ್ಷೆಯನ್ನು ಈ ವರ್ಷವೂ ನಡೆಸಲಾಗುವುದು ಎಂದು ಎನ್ಟಿಎ ಮಹಾನಿರ್ದೇಶಕ ವಿನೀತ್ ಜೋಶಿ ಮಾರ್ಚ್ 11 ರ ಗುರುವಾರ ಮಾಹಿತಿ ನೀಡಿದ್ದಾರೆ.
ನೀಟ್ 2021 ಪರೀಕ್ಷೆಯು ಒಟ್ಟು 720 ಅಂಕಗಳಿಗೆ ಆಫ್ಲೈನ್ ಮೋಡ್ನಲ್ಲಿ ನಡೆಯಲಿದೆ. ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಭಾಗಗಳು ತಲಾ 180 ಅಂಕಗಳನ್ನು ಹೊಂದಿದ್ದರೆ, ಜೀವಶಾಸ್ತ್ರ ವಿಭಾಗಕ್ಕೆ 360 ಅಂಕಗಳನ್ನು ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.