ಹುಬ್ಬಳ್ಳಿ: ರಾಜ್ಯದಲ್ಲಿಯೂ ಮಹಾಮಾರಿ ಕೊರೋನಾ ಮತ್ತೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಿಗೆ ಇಂದಿನಿಂದ ತೊಡಗಿದಂತೆ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
ಕೆಲ ಕಿಡಿಗೇಡಿಗಳು ಇಂತಹ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವ ಮೂಲಕ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ. ಸರ್ಕಾರದ ಹೆಸರು ದುರ್ಬಳಕೆ ಮಾಡಿ ಇಂತಹ ನಕಲಿ ಸುತ್ತೋಲೆಗಳನ್ನು ಸೃಷ್ಟಿಸುವುದು ಅಪರಾಧ. ಈ ವಿಚಾರವನ್ನು ಸೈಬರ್ ಪೊಲೀಸರ ಗಮನಕ್ಕೆ ತರಲಾಗಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಆಟವಾಡುವ ಕ್ರಮ ಸರಿಯಲ್ಲ. ಸರ್ಕಾರ ಕಾಲೇಜುಗಳಿಗೆ ರಜೆ ನೀಡುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ, ಸುತ್ತೋಲೆಗಳನ್ನು ಪ್ರಕಟಿಸಿಲ್ಲ. ಶೈಕ್ಷಣಿಕ ವ್ಯವಸ್ಥೆಯನ್ನು ಹಳಿ ತಪ್ಪಿಸಲು ನೋಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.