ಬೆಂಗಳೂರು: ರಾಜ್ಯದ ಮಸೀದಿ, ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ರಾಜ್ಯ ವಕ್ಫ್ ಬೋರ್ಡ್ ಸುತ್ತೋಲೆ ಹೊರಡಿಸಿದೆ.
ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 32 ಸಾವಿರ ಮಸೀದಿಗಳು ಮತ್ತು ದರ್ಗಾಗಳಲ್ಲಿ ಈ ಸೂಚನೆಯನ್ನು ಪಾಲನೆ ಮಾಡುವಂತೆಯೂ ತಿಳಿಸಲಾಗಿದೆ. ಕಳೆದ 2020 ರ ಡಿಸೆಂಬರ್ ತಿಂಗಳಿನಲ್ಲಿ ನಡೆದ ಸಭೆಯಲ್ಲಿ, ರಾಜ್ಯದ ಎಲ್ಲಾ ಮಸೀದಿಗಳ ಮತ್ತು ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ಧ ಮಾಲಿನ್ಯದ ನಿಯಂತ್ರಣ ಹೇಗೆ ಎಂಬ ಅರಿವು ಮೂಡಿಸುವುದರ ಸಂಬಂಧ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು. ಅದರನ್ವಯ ಈ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ವಕ್ಫ್ ಬೋರ್ಡ್ ಸಮಿತಿಯ ಸದಸ್ಯ, ಕರ್ನಾಟಕ ಮುಸ್ಲಿಂ ಜಮಾತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಶಾಫಿ ಸಾದಿ, ಆಝಾನ್ ಕುರಿತಂತೆ ವಕ್ಫ್ ಬೋರ್ಡ್ ಯಾವುದೇ ರೀತಿಯ ನಿಷೇಧ ಹೇರಿಲ್ಲ. ಬದಲಾಗಿ ಯಾವೆಲ್ಲಾ ಸಂದರ್ಭಗಳಲ್ಲಿ ಧ್ವನಿ ವರ್ಧಕಗಳನ್ನು ಬಳಕೆ ಮಾಡಬಹುದು ಎಂಬುದಾಗಿಯೂ ಸ್ಪಷ್ಟವಾಗಿ ತಿಳಿಸಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ನಿರ್ಣಯದಲ್ಲಿ ಲೋಪ ದೋಷಗಳಿದ್ದಲ್ಲಿ ಮುಂದಿನ ಸಭೆಯಲ್ಲಿ ಸರಿಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
[pdf-embedder url=”https://news13.in/wp-content/uploads/2021/03/Circular.pdf”]
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.