ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಗಮನಾರ್ಹವಾದ ಸಾಧನೆಯನ್ನು ಮಾಡುವ ಮೂಲಕ ವಿಶ್ವದ ಪ್ರಮುಖ ದೇಶಗಳನ್ನು ಸೆಳೆಯುತ್ತಿದೆ. ಇದೀಗ ಸೌದಿ ಅರೇಬಿಯಾ ಭಾರತದ ಜೊತೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಹಕಾರದ ಕುರಿತ ಚರ್ಚೆ ನಡೆಸಿದೆ. ಉಭಯ ದೇಶಗಳ ನಡುವೆ ಒಪ್ಪಂದ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಜೊತೆಗೆ ಸೌದಿಯ ಬಾಹ್ಯಾಕಾಶ ಆಯೋಗ ದ್ವಿಪಕ್ಷೀಯ ವರ್ಚುವಲ್ ಸಭೆಯನ್ನು ನಡೆಸಿದೆ.
ಭಾರತದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಇಸ್ರೋ ಅಧ್ಯಕ್ಷ ಕೆ.ಶಿವನ್ ಮತ್ತು ಸೌದಿ ಬಾಹ್ಯಾಕಾಶ ಆಯೋಗದ ನಿರ್ದೇಶಕರ ಮಂಡಳಿಯ ಅಧ್ಯಕ್ಷ ಪ್ರಿನ್ಸ್ ಸುಲ್ತಾನ್ ಬಿನ್ ಸಲ್ಮಾನ್ಈ ಸಹಕಾರ ಒಪ್ಪಂದ ಚರ್ಚೆಗಳ ನೇತೃತ್ವ ವಹಿಸಿದ್ದರು. ʼಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಬಾಹ್ಯಾಕಾಶ ಸಹಕಾರವನ್ನು ಪ್ರಾರಂಭಿಸುವ ಬಗ್ಗೆ ಎರಡೂ ದೇಶಗಳು ಚರ್ಚೆ ನಡೆಸಿವೆʼ ಎಂದು ಬೆಂಗಳೂರಿನ ಇಸ್ರೋ ಪ್ರಧಾನ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.