ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಿದ ಬಳಿಕ ಪಾಳಿ ವ್ಯವಸ್ಥೆಯನ್ನು ಜಾರಿಗೆ ತರುವ ಸಂಬಂಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಖಾಲಿ ಇರುವ ಹುದ್ದೆಗಳಿಗೆ ಅತಿ ಹೆಚ್ಚು ನೇಮಕಾತಿ ನಡೆದಿದೆ. ಇನ್ನೂ 23 ಸಾವಿರ ಹುದೆಗಳು ಖಾಲಿ ಇದ್ದು, ಅವುಗಳ ಭರ್ತಿಗೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹಾಗೆಯೇ ಕೆಪಿಎಸ್ಸಿ ಪರೀಕ್ಷೆಗಳಲ್ಲಾಗುವ ಅಕ್ರಮ ತಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕ್ರಮದಲ್ಲಿಯೇ ಬದಲಾವಣೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕಳೆದ ಬಾರಿ ಕೆಪಿಎಸ್ಸಿ ಪರೀಕ್ಷಾ ಪ್ರಶ್ನೆಪತ್ರಿಕೆಗಳು ಅಧಿಕಾರಿಗಳಿಂದಲೇ ನಡೆದ ಅಕ್ರಮವಾಗಿದ್ದು, ಇದು ಭದ್ರತಾ ಲೋಪದಿಂದಾಗಿ ನಡೆದದ್ದಲ್ಲ ಎಂಬುದನ್ನೂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ʼAnti ಡ್ರಗ್ ನೀತಿʼಯನ್ನು ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಹುಕ್ಕಾ ಬಾರ್ಗಳನ್ನು ನಿಷೇಧ ಮಾಡುವ ನಿಟ್ಟಿನಲ್ಲಿಯೂ ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇಂತಹ ದಂಧೆ ನಡೆಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.