ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕದ ಶಿವಮೊಗ್ಗ ಮೂಲದವರಾಗಿರುವ ಹೊಸಬಾಳೆ ಅವರು 2009 ರಿಂದ ಈಚೆಗೆ ಸಹ ಸರಕಾರ್ಯವಾಹರಾಗಿ, ಅಖಿಲ ಭಾರತೀಯ ಬೌದ್ಧಿಕ್ ಪ್ರಮುಖರಾಗಿ ಹಾಗೂ ಸಂಘದ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಇದೀಗ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಅವರನ್ನು ಸರಕಾರ್ಯವಾಹರಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಸುರೇಶ್ ಭಯ್ಯಾಜಿ ಜೋಶಿ ಅವರು ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸಿದ್ದರು.
ಕಳೆದ ಅನೇಕ ವರ್ಷಗಳಿಂದ ಹೊಸಬಾಳೆ ಅವರು ಆರ್ಎಸ್ಎಸ್ನಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಮೋಹನ್ ಭಾಗವತ್ ನಂತರದ ಪ್ರಮುಖ ಸ್ಥಾನಕ್ಕೆ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.