ಬೆಂಗಳೂರು: ಸಾರಿಗೆ ನೌಕರರಿಗೆ ಶೀಘ್ರದಲ್ಲೇ 6 ನೇ ವೇತನ ಆಯೋಗದ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆಯನ್ನು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ್ ಸವದಿ ಅವರು ನೀಡಿದ್ದಾರೆ.
ಹೊಳಲ್ಕೆರೆ ತಾಲೂಕಿನ ಬಸಾಪುರ ಗೇಟ್ನಲ್ಲಿ 16 ಕೋಟಿ ರೂ ವೆಚ್ಚದ ಕೆಎಸ್ಆರ್ಟಿಸಿ ಚಾಲಕರ ತರಬೇತಿ ಕೇಂದ್ರದ ಉದ್ಘಾಟನೆ ಹಾಗೂ 9 ಕೋಟಿ ರೂ. ವೆಚ್ಚದ ಬಸ್ ಡಿಪೋ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಮಯದಲ್ಲಿಯೂ ಸರ್ಕಾರದಿಂದ 1,900 ಕೋಟಿ ರೂ. ಗಳನ್ನು ಪಡೆದುಕೊಂಡು ಸಾರಿಗೆ ನೌಕರರಿಗೆ ವೇತನ ನೀಡುವ ಕೆಲಸವನ್ನು ಮಾಡಿದ್ದೇವೆ. ಆದರೂ ಕೆಲವು ನೌಕರರು ಯಾರದ್ದೋ ಮಾತು ಕೇಳಿ, ನಮ್ಮದೇ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ್ದು, ಮುಷ್ಕರ ನಡೆಸಿದ್ದ ನೋವು ನೀಡಿತ್ತು. ಸರ್ಕಾರ ಮತ್ತು ನೌಕರರು ಒಂದೇ ಕುಟುಂಬ ಎಂಬಂತೆ ಚಿಂತನೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ನೌಕರರ ಹತ್ತು ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರ ನಾಲ್ಕೂ ನಿಗಮಗಳ ನೌಕರರ ಹಿತ ರಕ್ಷಣೆಗೆ ಸದಾ ಸಿದ್ಧ ಎಂಬುದಾಗಿಯೂ ಸವದಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.