ನವದೆಹಲಿ: ಜಾಗತಿಕ ಸಾಂಕ್ರಾಮಿಕ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಸಿದೆ. ದೇಶದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್ಗಳ ಒಟ್ಟು ಸಂಖ್ಯೆ ನಿನ್ನೆ 5 ಕೋಟಿ ದಾಟಿದೆ. ಒಟ್ಟು 5 ಕೋಟಿ 75 ಸಾವಿರ 162 ಲಸಿಕೆ ಡೋಸ್ ಅನ್ನು ಈವರೆಗೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಮೊದಲ ಡೋಸ್ ತೆಗೆದುಕೊಂಡ ಆರೋಗ್ಯ ಕಾರ್ಯಕರ್ತರ ಸಂಖ್ಯೆ 79 ಲಕ್ಷಕ್ಕೂ ಹೆಚ್ಚು ಮತ್ತು ಎರಡನೇ ಡೋಸ್ ತೆಗೆದುಕೊಂಡ ಆರೋಗ್ಯ ಕಾರ್ಯಕರ್ತರ ಸಂಖ್ಯೆ 50 ಲಕ್ಷಕ್ಕೂ ಹೆಚ್ಚು.
83.33 ಲಕ್ಷ ಮುಂಚೂಣಿ ಕಾರ್ಮಿಕರಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ನೀಡಿದರೆ, 30.60 ಲಕ್ಷ ಮುಂಚೂಣಿ ಕಾರ್ಮಿಕರು ಎರಡನೇ ಡೋಸ್ ಪಡೆದಿದ್ದಾರೆ. 60 ವರ್ಷ ವಯಸ್ಸಿನ 2 ಕೋಟಿ 12 ಲಕ್ಷ ಫಲಾನುಭವಿಗಳು ಮತ್ತು ಇತರ ಕಾಯಿಲೆ ಹೊಂದಿರುವ 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 45 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.
ರಾಷ್ಟ್ರವ್ಯಾಪಿ ಕೋವಿಡ್ 19 ವ್ಯಾಕ್ಸಿನೇಷನ್ ಆರಂಭವಾದ ಅರವತ್ತೇಳನೇ ದಿನದಂದು ನಿನ್ನೆ ಸಂಜೆ 7 ಗಂಟೆಯವರೆಗೆ 15 ಲಕ್ಷ 80 ಸಾವಿರ ಲಸಿಕೆ ಡೋಸ್ ಅನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.