ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಿದ್ದರೂ ಸಿನಿಮಾ ನಟರು ತಮ್ಮ ಅಭಿಮಾನಿಗಳನ್ನು ಗುಂಪು ಸೇರಿಸಿಕೊಂಡು ಚಲನಚಿತ್ರಗಳ ಪ್ರಚಾರ ನಡೆಸುತ್ತಿದ್ದು, ಈ ಬಗ್ಗೆ ಸಚಿವ ಡಾ ಕೆ ಸುಧಾಕರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಚಿತ್ರ ನಟರಿಗೂ ಸಾಮಾಜಿಕ ಜವಾಬ್ದಾರಿಗಳಿದ್ದು ಅದನ್ನ ಮೀರಬಾರದು ಎಂದು ತಿಳಿಸಿದ್ದಾರೆ. ಈಗ ಎಚ್ಚೆತ್ತುಕೊಳ್ಳದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುವ, ಅನಾಹುತ ಸೃಷ್ಟಿಯಾಗುವ ಸಂಭವ ಇದೆ ಎಂದು ಅವರು ಎಚ್ಚರಿಸಿದ್ದಾರೆ. ಮಾಸ್ಕ್ ಹಾಕುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಫ್ಯಾನ್ಸ್ಗಳಿಗೂ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿ ಎಂದು ಸಿನಿಮಾ ನಟರಿಗೆ ಸಚಿವರು ಸೂಚಿಸಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಮಠಾಧೀಶರಿಗೂ ಮನವಿ ಸಲ್ಲಿಸಿರುವ ಸುಧಾಕರ್, ಜಾತ್ರೆ, ಸಮಾರಂಭಗಳಿಗೆ ಕಡಿವಾಣ ಹಾಕುವಂತೆ ತಿಳಿಸಿದ್ದಾರೆ. ನಿಯಂತ್ರಣ ಕ್ರಮಗಳ ಸಮರ್ಪಕ ಪಾಲನೆ ಮಾತ್ರವೇ ಕೊರೋನಾಗೆ ಪರಿಣಾಮಕಾರಿ ಕ್ರಮವಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವಂತೆಯೂ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.