ನವದೆಹಲಿ: 2021 ರ ಏಪ್ರಿಲ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎಸ್ಎ ಬೊಬ್ಡೆ ಅವರು ಅಧಿಕಾರದಿಂದ ನಿವೃತ್ತರಾಗಲಿದ್ದಾರೆ. ಹೀಗಾಗಿ ಅವರು ತನ್ನ ಉತ್ತರಾಧಿಕಾರಿಯಾಗಿ ನೇಮಕ ಮಾಡಲು ನ್ಯಾಯಮೂರ್ತಿ ಎನ್ವಿ ರಮಣ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ನಂತರ 2019 ರ ನವೆಂಬರ್ನಲ್ಲಿ ನ್ಯಾಯಮೂರ್ತಿ ಬೊಬ್ಡೆ ಭಾರತದ 47 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿಜೆಐ ಬೊಬ್ಡೆ ಅವರ ನಿವೃತ್ತಿಗೆ ಕೆಲವೇ ದಿನಗಳು ಬಾಕಿ ಇರುವಾಗ ಅವರ ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಕೇಂದ್ರವು ಕೇಳಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಮುಖ್ಯ ನ್ಯಾಯಮೂರ್ತಿಗಳು ತಮ್ಮ ಉತ್ತರಾಧಿಕಾರಿಯನ್ನು ಶಿಫಾರಸು ಮಾಡಿ ಪತ್ರ ಬರೆಯುವುದು ವಾಡಿಕೆ. ನ್ಯಾಯಮೂರ್ತಿ ಎನ್.ವಿ.ರಮಣ ಅವರು ಸಿಜೆಐ ಬೊಬ್ಡೆ ನಂತರ ಸುಪ್ರೀಂಕೋರ್ಟ್ನಲ್ಲಿ ಹಿರಿಯ ನ್ಯಾಯಾಧೀಶರಾಗಿದ್ದಾರೆ. ಆಗಸ್ಟ್ 27, 1957 ರಂದು ಜನಿಸಿದ ನ್ಯಾಯಮೂರ್ತಿ ರಮಣ ಅವರು 2022 ರ ಆಗಸ್ಟ್ 26 ರವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ.
ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ಜೂನ್ 2000 ರಲ್ಲಿ ಆಂಧ್ರಪ್ರದೇಶದ ಹೈಕೋರ್ಟ್ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸಲಾಯಿತು. ಅವರು ಫೆಬ್ರವರಿ 2014 ರಲ್ಲಿ ಸುಪ್ರೀ ಕೋರ್ಟ್ಗೆ ಏರುವ ಮೊದಲು ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.