ಬೆಂಗಳೂರು: ಕಳೆದ ವರ್ಷದಲ್ಲಿ ನಡೆದ ಮೆಗಾ ಲೋಕ ಅದಾಲತ್ನಲ್ಲಿ ಒಂದೇ ದಿನ ದಾಖಲೆಯ ಪ್ರಮಾಣದ ಆಸ್ತಿ ಮೊಕದ್ದಮೆಗಳನ್ನು ರಾಜ್ಯದ ನ್ಯಾಯಾಂಗ ಪರಿಹರಿಸಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕರ್ನಾಟಕ ನ್ಯಾಯಾಂಗ ವ್ಯವಸ್ಥೆಯನ್ನು ಶ್ಲಾಘಿಸಿದೆ.
ಶನಿವಾರ ನಡೆಯಲಿರುವ ಮೆಗಾ ಲೋಕ ಅದಾಲತ್ ಬಗ್ಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ತಿಳಿಸಿದ್ದು, ಕಳೆದ ವರ್ಷ ಡಿಸೆಂಬರ್ 18 ರಂದು ನಡೆಸಿದ್ದ ಲೋಕ ಅದಾಲತ್ನಲ್ಲಿ ದಾಖಲೆಯ ಪ್ರಮಾಣದ ಆಸ್ತಿ ವಿವಾದಗಳನ್ನು ಬಗೆಹರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್ ಆರ್ ಬೊಬ್ಡೆ ಅವರು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ಒಂದು ಲೋಕ ಅದಾಲತ್ನಲ್ಲಿ ಸುಮಾರು ದಿನಕ್ಕೆ 20 ರಿಂದ 25, ಗರಿಷ್ಟ 45 ರ ವರೆಗೆ ವಿವಅದಗಳನ್ನು ಬಗೆಹರಿಸಲು ಸಾಧ್ಯವಿದೆ. ಆದರೆ ಕರ್ನಾಟಕದಲ್ಲಿ ಡಿಸೆಂಬರ್ 18 ರಂದು ಒಂದೇ ದಿನದಲ್ಲಿ 3093 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಮೂಲಕ ದಾಖಲೆ ಮಾಡಲಾಗಿದೆ. ಇನ್ನೂ ಸುಮಾರು 60 ಸಾವಿರಗಳಷ್ಟು ಪ್ರಕರಣಗಳು ಬಾಕಿ ಇದ್ದು, ಲೋಕ ಅದಾಲತ್ ಮೂಲಕ ಅದೆಲ್ಲವನ್ನೂ ಪರಿಹರಿಸುವುದಕ್ಕೆ ಪ್ರಯತ್ನ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.