ಬೆಂಗಳೂರು: ಮರಣ ಪ್ರಮಾಣ ಇಳಿಕೆ ಮಾಡುವ ದೃಷ್ಟಿಯಿಂದ ಮತ್ತು ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆಯನ್ನು ನೀಗಿಸುವ ಹಿನ್ನೆಲೆಯಲ್ಲಿ ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ಎಲ್ಲಾ ಕಾಯಿಲೆಗಳಿಗೂ ಟೆಲಿ-ಐಸಿಯು ಸೇವೆಯನ್ನು ಒದಗಿಸಲು ರಾಜ್ಯದ ಆರೋಗ್ಯ ಇಲಾಖೆ ಮುಂದಾಗಿದೆ.
ಎಪ್ರಿಲ್ ಅಂತ್ಯದೊಳಗಾಗಿ ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಮತ್ತು ಇನ್ನಿತರ ಪ್ರಮುಖ ಆಸ್ಪತ್ರೆಗಳಲ್ಲಿ ಈ ಸೇವೆ ಲಭ್ಯವಾಗಲಿದೆ ಎಂದು ಇಲಾಖೆ ಹೇಳಿದೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯಡಿಯಲ್ಲಿ 2008 ತಜ್ಞ ವೈದ್ಯರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಲವು ಸರ್ಕಾರಿ ಆಸ್ಪತ್ರೆಗಳು ವೈದ್ಯರ ಕೊರತೆಯನ್ನೂ ಅನುಭವಿಸುತ್ತಿವೆ. ಇದಕ್ಕೆ ಪರಿಹಾರ ಎಂಬಂತೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತಹ ಟೆಲಿ ಐಸಿಯು ಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ಯೋಜನೆಯಡಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಜ್ಞ ವೈದ್ಯರನ್ನು ಬಳಸಿಕೊಂಡು, ರಾಜ್ಯಾದ್ಯಂತ ಏಕರೂಪದ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಕೊರೋನಾ ಹೊರತಾದ ಕಾಯಿಲೆಗಳಿಂದ ಮರಣವನ್ನಪ್ಪುವವರ ಸಂಖ್ಯೆಯನ್ನು ಕಡಿಮೆ ಮಾಡುವುದಕ್ಕೆ ಈ ಕ್ರಮ ಪೂರಕವಾಗಲಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.