ತಿರುವನಂತಪುರ: ಕೇರಳದ ರಾಜಕಾರಣದಲ್ಲಿ ಎಲ್ಡಿಎಫ್ ಮತ್ತು ಯುಡಿಎಫ್ಗಳು ಸೌಹಾರ್ದ ಒಪ್ಪಂದ ಮಾಡಿಕೊಂಡಿವೆ. ಈವರೆಗೆ ಗೌಪ್ಯವಾಗಿ ಕಾಪಾಡಿಕೊಂಡು ಬಂದಿದ್ದ ಗುಟ್ಟು ಈಗ ಜನರಿಗೆ ಅರಿವಾಗಿದೆ. ಇದೇನು ಮ್ಯಾಚ್ಫಿಕ್ಸಿಂಗ್ ಎಂದು ಜನರೇ ಪ್ರಶ್ನೆ ಕೇಳುವಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಕೇರಳದ ಪಾಲಕ್ಕಾಡ್ನಲ್ಲಿ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಅವರ ಪರ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಅವರು ಶ್ರೀಧರನ್ ಅವರನ್ನು ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು ಶ್ರೀಧರನ್ ಅವರು ಭಾರತವನ್ನು ಆಧುನೀಕರಣಗೊಳಿಸುವ ನಿಟ್ಟಿನಲ್ಲಿ, ಸಂಪರ್ಕ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದಾರೆ. ಸಮಾಜದ ಎಲ್ಲಾ ವಿಭಾಗಗಳ ಜನರಿಂದಲೂ ಅವರು ಗೌರವ ಪಡೆಯುತ್ತಿದ್ದಾರೆ. ಕೇರಳದ ಅಭಿವೃದ್ಧಿ ವಿಚಾರದಲ್ಲಿಯೂ ಅವರು ಬದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. ಕೇರಳದ ಜನರಿಗೆ ಎಲ್ಡಿಎಫ್ ಮೋಸ ಮಾಡಿದ್ದಾಗಿ ಅವರು ಹೇಳಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತ ನೀಡಿ, ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ಸೂಚಿಸುವಂತೆ ಮೋದಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.