ಮಂಗಳೂರು: ರಾಜ್ಯದಲ್ಲಿಯೂ ಕೊರೋನಾ ಎರಡನೇ ಅಲೆ ಬೀಸಲಾರಂಭಿಸಿದ್ದು, ಈ ಸಂಬಂಧ ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆಗೆ ಚರ್ಚೆ ನಡೆಸಿ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ.
ಅದರ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಸಿಆರ್ಪಿಸಿಯ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಅದರೊಂದಿಗೆ ಎಲ್ಲಾ ರೀತಿಯ ಧಾರ್ಮಿಕ ಸಮಾರಂಭಗಳಿಗೂ ಅವರು ನಿಷೇಧ ಹೇರಿದ್ದಾರೆ.
ಜಿಲ್ಲೆಯಲ್ಲಿ ಯುಗಾದಿ, ಹೋಳಿ, ಶಬ್ ಇ ಬರಾತ್, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳು ಮತ್ತು ಸಮಾರಂಭಗಳನ್ನು ಈ ನಿಷೇಧಾಜ್ಞೆಯ ಕಾರಣದಿಂದ ಸಾರ್ವಜನಿಕ ಪ್ರದೇಶಗಳಲ್ಲಿ, ಮೈದಾನ, ಉದ್ಯಾನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ನಡೆಸದಂತೆ ಸೂಚಿಸಿದ್ದಾರೆ. ಜಾತ್ರೆ, ಮೆರವಣಿಗೆ, ಸಮಾವೇಶ, ಆಚರಣೆಗಳು, ಧಾರ್ಮಿಕ ಕಾರ್ಯಕ್ರಮ ಮೊದಲಾದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಪ್ರದೇಶಗಳಲ್ಲಿ ಕೊರೋನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆಯೂ ಸೂಚಿಸಿದ್ದಾರೆ. ಜೊತೆಗೆ ಒಂದು ಪ್ರದೇಶದಲ್ಲಿ ಐದು ಮಂದಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂಬುದಾಗಿಯೂ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Karnataka: Dakshina Kannada District Deputy Commissioner imposes Section 144 of CrPC, in view of rising COVID-19 positive cases in the district. All religious gatherings banned at public places, public grounds, gardens, markets and religious places.
— ANI (@ANI) March 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.