ದುಶಾನ್ಬೆ: ಅಫ್ಘಾನಿಸ್ಥಾನದಲ್ಲಿರುವ ಹಿಂಸಾಚಾರ ಮತ್ತು ರಕ್ತಪಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಭಾರತ, ಯುದ್ಧ ಪೀಡಿತ ದೇಶದೊಳಗೆ ಮತ್ತು ಸುತ್ತಲೂ ಶಾಂತಿಯ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ಸಂಬಂಧ ತಜಕಿಸ್ಥಾನದ ರಾಜಧಾನಿ ದುಶಾನ್ಬೆಯಲ್ಲಿ ʼಹಾರ್ಟ್ ಆಫ್ ಏಷ್ಯಾʼದ 9 ನೇ ಸಮಾವೇಶದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಅಫ್ಘಾನಿಸ್ಥಾನ ಮತ್ತು ತಾಲೀಬಾನ್ ನಡುವಿನ ಮಾತುಕತೆಗಳನ್ನು ನಡೆಸಲು ತೆಗೆದುಕೊಂಡಿರುವ ಎಲ್ಲಾ ಕ್ರಮಗಳನ್ನು ಭಾರತ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಅಫ್ಘಾನಿಸ್ಥಾನಕ್ಕೆ ನಿಜವಾದ ಶಾಂತಿ ಬೇಕಾಗಿದೆ. ಈ ದ್ವಿಶಾಂತಿಯ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವಿನ ಚುರುಕಿನ ಮಾತುಕತೆಗಳಿಗೆ ಭಾರತ ಸದಾ ಬೆಂಬಲ ನೀಡುತ್ತದೆ. ಅಫ್ಘಾನಿಸ್ಥಾನದ ಸುತ್ತಮುತ್ತಲಿನಲ್ಲಿಯೂ ಈಗ ಶಾಂತಿಯ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಎಲ್ಲಾ ಹಿತಾಸಕ್ತಿಗಳನ್ನು ಕಾಪಾಡುವ ಸಮನ್ವಯತೆ ಸಾಧಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.