ಬೆಂಗಳೂರು: ಅಕ್ಷರ ಯೋಜನೆಯಡಿಯಲ್ಲಿ ರಾಜ್ಯದ 5 ಶಾಲೆಗಳನ್ನು ದತ್ತು ಪಡೆದಿದ್ದ ಮೌಂಟ್ ಕಾರ್ಮೆಲ್ ಕಾಲೇಜು, ಈ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಕಾರ್ಯಯೋಜನೆಗಳನ್ನು ರೂಪಿಸಿದೆ.
ಕಳೆದ ಜನವರಿ ತಿಂಗಳಿನಲ್ಲಿ ರಾಜ್ಯದ ಎಂಎಸ್ಆರ್ ಪಾಳ್ಯ, ಗಂಧನಹಳ್ಳಿ, ಒಪಿಎಚ್ ರಸ್ತೆ, ಜೀವನಹಳ್ಳಿ ಮತ್ತು ರಾಮಸ್ವಾಮಿ ಪಾಳ್ಯದ ಸರ್ಕಾರಿ ಶಾಲೆಗಳನ್ನು ಮೌಂಟ್ ಕಾರ್ಮೆಲ್ ಕಾಲೇಜು ದತ್ತು ಪಡೆದಿದ್ದು, ಅವುಗಳನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.
ಈ ಶಾಲೆಗಳಿಗೆ ನೀರಿನ ವ್ಯವಸ್ಥೆ, ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ ಹಾಗೂ ಕ್ರೀಡಾ ಕೊಠಡಿಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಶಾಲೆಗೆ ನೂತನ ಕೊಠಡಿಗಳ ನಿರ್ಮಾಣಕ್ಕೂ ಎಂಸಿಸಿ ಸಿದ್ಧತೆ ನಡೆಸಿದೆ. ಎಂಎಸ್ಆರ್ ಶಾಲೆಯಲ್ಲಿ ಈಗಾಗಲೇ ಈ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂಬುದಾಗಿಯೂ ಮೂಲಗಳು ತಿಳಿಸಿವೆ. ಪ್ರಸ್ತುತ ಉಳಿದ ನಾಲ್ಕೂ ಶಾಲೆಗಳಲ್ಲಿ ಈ ಎಲ್ಲಾ ಸೌಕರ್ಯಗಳನ್ನು ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಎಂಸಿಸಿ ತಿಳಿಸಿದೆ.
ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಾಲೆಯಲ್ಲಿ ಶಿಕ್ಷಕರಿಗೆ ತರಬೇತಿ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಎಂಸಿಸಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.