ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಕರ್ನಾಟಕದಲ್ಲಿಯೂ ಕೊರೋನಾ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಜೊತೆಗೆ ರಾಜ್ಯದಲ್ಲಿ ಹಲವು ಕಠಿಣ ನಿಯಮಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ಸಹ ಹೊರಡಿಸಲಾಗಿದೆ.
ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಅನುಗುಣವಾಗಿ ದೇಶದೆಲ್ಲೆಡೆ ಇಂದಿನಿಂದ ಆರಂಭವಾಗುವಂತೆ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಸೂಚಿಸಿದ್ದು, ರಾಜ್ಯದಲ್ಲಿಯೂ ಇಂದಿನಿಂದ ತೊಡಗಿದಂತೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆಗಳನ್ನು ನೀಡಲಾಗುತ್ತಿದ್ದು, ಇದಕ್ಕೆ ಪೂರಕವಾಗುವಂತೆ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಲಸಿಕೆ ಪಡೆಯುವ ಮೂಲಕ ಕೊರೋನಾ ಸೋಂಕು ತಗುಲುವ ಸಾಧ್ಯತೆಯನ್ನು ಕಡಿಮೆ ಮಾಡಿಕೊಳ್ಳುವಂತೆಯೂ ಸರ್ಕಾರ ಸೂಚಿಸಿದೆ.
ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ ಲಸಿಕೆ ಲಭ್ಯವಿದ್ದು, ರಾಜ್ಯದಲ್ಲಿ ಸುಮಾರು 1.66 ಕೋಟಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ 13.5 ಲಕ್ಷ ಕೋವಿಶೀಲ್ಡ್, 1.5 ಲಕ್ಷ ಕೋವ್ಯಾಕ್ಸಿನ್ ಸೇರಿದಂತೆ ಒಟ್ಟು 15 ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಅಗತ್ಯಕ್ಕನುಗುಣವಾಗಿ ಎಲ್ಲಾ ಜಿಲ್ಲೆಗಳಿಗೆ ಹಂಚಲಾಗಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ ಲಸಿಕೆ ಲಭ್ಯವಿದ್ದು, ರಾಜ್ಯದಲ್ಲಿ ಸುಮಾರು 1.66 ಕೋಟಿ ಫಲಾನುಭವಿಗಳಿದ್ದಾರೆ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ 13.5 ಲಕ್ಷ ಕೋವಿಶೀಲ್ಡ್, 1.5 ಲಕ್ಷ ಕೋವ್ಯಾಕ್ಸಿನ್ ಸೇರಿದಂತೆ ಒಟ್ಟು 15 ಲಕ್ಷ ಡೋಸ್ ಲಸಿಕೆ ಲಭ್ಯವಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲೆಗಳಿಗೆ ಹಂಚಲಾಗಿದೆ.
— Dr Sudhakar K (@DrSudhakar_) April 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.