ಬೆಂಗಳೂರು: ಕೊರೋನಾ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸದೇ ಇರುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ, ನಿಲ್ದಾಣದಲ್ಲಿ ನಿಯಮವನ್ನು ಉಲ್ಲಂಘನೆ ಮಾಡುವವರಿಗೆ ದಂಡಾಸ್ತ್ರ ಪ್ರಯೋಗಕ್ಕೆ ʼನಮ್ಮ ಮೆಟ್ರೋʼ ಮುಂದಾಗಿದೆ.
ಮೆಟ್ರೋ ರೈಲುಗಳಲ್ಲಿ ಮತ್ತು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವವರಿಗೆ ದಂಡ ಹಾಕುವುದಕ್ಕೆ ಮೆಟ್ರೋ ಯೋಚಿಸಿದೆ. ಈ ಸಂಬಂಧ ಹಲವಾರು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗಿರುವುದಾಗಿಯೂ ಮೆಟ್ರೋ ಹೇಳಿದೆ.
ಸರಿಯಾಗಿ ಮಾಸ್ಕ್ ಧರಿಸದೇ ಇರುವವರಿಗೆ ರೂ. 250 ಗಳನ್ನು ದಂಡವಾಗಿ ವಿಧಿಸಲಾಗುತ್ತದೆ ಎಂಬುದಾಗಿಯೂ ಮೆಟ್ರೋ ಹೇಳಿದೆ. ಮೆಟ್ರೋ ನಿಲ್ದಾಣಗಳಲ್ಲಿ ಕೊರೋನಾ ನಿಯಮ ಪಾಲನೆ ಮಾಡುವಂತೆ ಆಗಾಗ ಸೂಚನೆಯನ್ನು ನೀಡುತ್ತಿದ್ದರೂ ಪ್ರಯಾಣಿಕರು ಮಾತ್ರ ಈ ಸಂಬಂಧ ಯಾವುದೇ ರೀತಿಯಲ್ಲಿ ಗಮನ ಹರಿಸದೇ ಇರುವ ಹಿನ್ನೆಲೆಯಲ್ಲಿ ದಂಡ ವಿಧಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. ನಿಯಮಗಳನ್ನು ಪಾಲನೆ ಮಾಡದವರ ಬಗ್ಗೆ ನಿಗಾ ವಹಿಸುವುದಕ್ಕೆ ಈಗಾಗಲೇ ಮೂರು ಜನರನ್ನೊಳಗೊಂಡ ಸದಸ್ಯರ ತಂಡವನ್ನು ಸಹ ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲುಗಳಲ್ಲಿಯೂ ಕೆಲವರು ಮಾಸ್ಕ್ ಧರಿಸುವುದಿಲ್ಲ, ಕೆಲವರು ಮಾಸ್ಕ್ ಅನ್ನು ಸರಿಯಾಗಿ ಧರಿಸುವುದಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಯಮವೂ ಸರಿಯಾಗಿ ಪಾಲನೆಯಾಗುತ್ತಿಲ್ಲ. ಇದರಿಂದಾಗಿ ಇತರ ಪ್ರಯಾಣಿಕರು ಸಹ ಸಮಸ್ಯೆ ಅನುಭವಿಸುವಂತಾಗಿದೆ ಎಂದು ಮೆಟ್ರೋ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.