ಬೆಂಗಳೂರು: ರಾಜ್ಯದೊಳಕ್ಕೆ ವಿಮಾನದ ಮೂಲಕ ಆಗಮಿಸುವ ಮೂರು ರಾಜ್ಯಗಳ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಇಎಲ್) ತಿಳಿಸಿದೆ.
ಎ. 1 ರಿಂದ ತೊಡಗಿದಂತೆ ನಗರಕ್ಕೆ ಪ್ರವೇಶಿಸುವ ಎಲ್ಲಾ ರಾಜ್ಯದವರಿಗೂ ಕೊರೋನಾ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದರು. ಈ ಬೆನ್ನಲ್ಲೇ ಬಿಐಎಎಲ್ ಈ ಬಗ್ಗೆ ಸ್ಪಷ್ಟನೆಯನ್ನು ನೀಡಿದೆ.
ರಾಜ್ಯ ಸರ್ಕಾರ ಈಗಾಗಲೇ ನಿರ್ದೇಶನ ನೀಡಿದಂತೆ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ 72 ಗಂಟೆಗಿಂತ ಹಳೆಯದಾಗಿರಬಾರದು. ಮಹಾರಾಷ್ಟ್ರ, ಕೇರಳ, ಪಂಜಾಬ್, ಚತ್ತೀಸ್ಘಡದಿಂದ ಬರುವ ಪ್ರಯಾಣಿಕರಂತೂ ಕಡ್ಡಾಯವಾಗಿ ಕೊರೋನಾ ನೆಗೆಟಿವ್ ವರದಿಯನ್ನು ಹೊಂದಿರಲೇ ಬೇಕು ಎಂದು ಹೇಳಿದೆ.
ಹಾಗೆಯೇ ವಿಮಾನವೇರುವ ಸಂದರ್ಭದಲ್ಲಿ ಏರ್ಲೈನ್ಸ್ ಸಿಬ್ಬಂದಿಗಳೇ ಈ ವರದಿಯನ್ನು ಪರಿಶೀಲನೆ ನಡೆಸಲಿದ್ದಾರೆ. ಈ ನಾಲ್ಕು ರಾಜ್ಯಗಳನ್ನು ಹೊರತುಪಡಿಸಿದಂತೆ ಉಳಿದ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಮಾರ್ಗಸೂಚಿಯನ್ನು ಹೊರಡಿಸಿಲ್ಲ ಎಂಬುದಾಗಿಯೂ ಬಿಐಇಎಲ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.