ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರಂಭವಾಗಿದ್ದು, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದೆ. 2021 ರ ಎಪ್ರಿಲ್ 30 ರ ವರೆಗೂ ಜಾರಿಯಲ್ಲಿರುತ್ತದೆ ಎಂಬುದಾಗಿಯೂ ಈ ನೂತನ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ.
ಈ ನೂತನ ಮಾರ್ಗಸೂಚಿಯನ್ವಯ ರಾಜ್ಯದಲ್ಲಿ ಕಂಟೈನ್ಮೆಂಟ್ ಎಂದು ಗುರುತು ಮಾಡಲಾದ ಪ್ರದೇಶಗಳಲ್ಲಿ ಅಗತ್ಯ ಚಟುವಟಿಕೆಗಳಿಗೆ ಮಾತ್ರವೇ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ತುರ್ತು ಆರೋಗ್ಯ ಸೇವೆ ಮತ್ತು ಅಗತ್ಯ ಸರಕುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಹೊರತುಪಡಿಸಿ ಉಳಿದಂತೆ ಜನರ ಚಲನವಲನಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಉದ್ದೇಶದಿಂದ ರಚಿತವಾಗಿರುವ ತಂಡಗಳು ಮನೆ ಮನೆ ಪರಿಶೀಲನೆ ನಡೆಸಲಿವೆ ಎಂಬುದಾಗಿಯೂ ಆದೇಶದಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ನಿಗದಿಪಡಿಸಲಾಗಿರುವ ಶಿಷ್ಟಾಚಾರದ ಜೊತೆಗೆ ಪರೀಕ್ಷೆಗಳನ್ನು ನಡೆಸುವಂತೆಯೂ ಸೂಚಿಸಿದೆ.
ಆರೋಗ್ಯ ಕಾರ್ಯಕರ್ತರು ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ವಹಿಸುವಂತೆ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಮಾಸ್ಕ್ ಧರಿಸದಿದ್ದವರ ವಿರುದ್ಧ ನಗರ ಪ್ರದೇಶಗಳಲ್ಲಿ 250 ರೂ ದಂಡ ಮತ್ತು ಉಳಿದಂತೆ 100 ರೂ. ದಂಡ ವಿಧಿಸಲು ಸ್ಥಳೀಯಾಡಳಿತ/ಜಿಲ್ಲಾ ಪ್ರಾಧಿಕಾರಗಳು/ಬಿಬಿಎಂಪಿ ಗೆ ಸೂಚಿಸಿರುವುದಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ. ಅದರ ಜೊತೆಗೆ ಇನ್ನೂ ಹಲವಾರು ಅನುಸರಿಸಲೇ ಬೇಕಾದ ಮಹತ್ವದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರ ತನ್ನ ನೂತನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಕೋವಿಡ್ -19 ಸೋಂಕು ನಿಯಂತ್ರಣಕ್ಕೆ ತರಲು ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಮಾರ್ಗಸೂಚಿಯು 2021 ರ ಏಪ್ರಿಲ್ 30 ರವರೆಗೆ ಜಾರಿಯಲ್ಲಿರುತ್ತದೆ.#KarnatakaFightsCorona@CMofKarnataka @BSYBJP @DHFWKA pic.twitter.com/z8s0a2vMFS
— DIPR Karnataka (@KarnatakaVarthe) April 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.