ವಾಷಿಂಗ್ಟನ್: ಹವಾಮಾನ ಬದಲಾವಣೆಗೆ ಸಂಬಂಧಿಸಿದ ಅಮೆರಿಕ ಅಧ್ಯಕ್ಷರ ವಿಶೇಷ ರಾಯಭಾರಿ ಜಾನ್ ಕೆರ್ರಿ ಅವರು ಭಾರತಕ್ಕೆ ಬರಲಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಎಪ್ರಿಲ್ 9 ರವರೆಗೆ ಯುಎಇ, ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಹವಮಾನ ಬದಲಾವಣೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಎಪ್ರಿಲ್ 22 ರಿಂದ 23 ರವರೆಗೆ ಅಧ್ಯಕ್ಷ ಜೋ ಬೈಡೆನ್ ನೇತೃತ್ವದಲ್ಲಿ ನಡೆಯಲಿರುವ ಹವಾಮಾನ ಕುರಿತ ಶೃಂಗಸಭೆ ಮತ್ತು ನವೆಂಬರ್ನಲ್ಲಿ ಗ್ಲಾಸ್ಕೋದಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಹವಮಾನ ಬದಲಾವಣೆ ಕುರಿತಂತೆ ಇನ್ನಷ್ಟು ಬದ್ಧತೆ ಪ್ರದರ್ಶಿಸಲು ಜಾನ್ ಕೆರ್ರಿ ಅವರು ಈ ಪ್ರವಾಸ ಕೈಗೊಂಡಿದ್ದಾರೆ.
ಹವಮಾನ ಬಿಕ್ಕಟ್ಟನ್ನು ಹೇಗೆ ನಿಭಾಯಿಸುವುದು ಎಂಬುದರ ಕುರಿತು ಬಾಂಗ್ಲಾದೇಶ, ಭಾರತ, ಅರಬ್ ಒಕ್ಕೂಟದೊಂದಿಗೆ ಚರ್ಚಿಸಲು ಮತ್ತು ಸಲಹೆಗಳನ್ನು ಪಡೆಯಲು ಜಾನ್ ಕೆರ್ರಿ ಅವರು ಈ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.
ಎಪ್ರಿಲ್ 22 – 23 ರಂದು ವರ್ಚುವಲ್ ರೂಪದಲ್ಲಿ ನಡೆಯಲಿರುವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಏಷ್ಯಾದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.