ನವದೆಹಲಿ: ಕಳೆದ ಹಣಕಾಸು ವರ್ಷದಲ್ಲಿ ಇತರ ದೇಶಗಳಿಗಿಂತ ಹೆಚ್ಚಿನ ಹೆದ್ದಾರಿಗಳನ್ನು ನಿರ್ಮಿಸುವ ಮೂಲಕ ಭಾರತ ರಸ್ತೆ ನಿರ್ಮಾಣದಲ್ಲಿ ಒಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
2020-21ನೇ ಸಾಲಿನಲ್ಲಿ ಪ್ರತಿದಿನ 37 ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ 13,000 ಕಿಲೋಮೀಟರ್ ರಸ್ತೆಗಳನ್ನು ನಿರ್ಮಿಸಲಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಎದುರಿಸಿದ ಸವಾಲುಗಳ ನಡುವೆಯೂ ಈ ಸಾಧನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ನಡುವೆ, ಕಳೆದ ಏಳು ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಉದ್ದವು ಶೇಕಡಾ 50 ರಷ್ಟು ಏರಿದ್ದು, 91 ಸಾವಿರ ಕಿಲೋಮೀಟರ್ಗಿಂತ 1 ಲಕ್ಷ 37 ಸಾವಿರ ಕಿಲೋಮೀಟರ್ಗೆ ಏರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.