ಬೆಂಗಳೂರು: ಕೊರೋನಾ ಬಳಿಕ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೂ ಆರ್ಥಿಕ ಹೊಡೆತ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಯೋಜನೆಗನ್ನು ರೂಪುಗೊಳಿಸಲು ಇಲಾಖೆ ಮುಂದಾಗಿದೆ.
ಈ ಸಂಬಂಧ ಸಚಿವ ಸಿ ಪಿ ಯೋಗೇಶ್ವರ್ ಅವರು ಕೆಲವೊಂದು ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದ್ದು, ಈ ಯೋಜನೆಗಳ ಕುರಿತಂತೆ ಇಲಾಖೆಯ ಅಧಿಕಾರಿಗಳ ಜೊತೆಗೂ ಸಭೆ ನಡೆಸಿದ್ದಾರೆ. ಪ್ರವಾಸಿಗರಿಗೆ ಹೊಸ ಬಗೆಯ ಅನುಕೂಲಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಹೊಸ ಹೊಸ ಕಾರ್ಯಕ್ರಮಗಳ ಬಗ್ಗೆ ಈ ಸಭೆಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈ ಸಂಬಂಧ ಬೆಂಗಳೂರು, ಮೈಸೂರು, ಕಲಬುರ್ಗಿ, ಮಂಗಳೂರು, ಹುಬ್ಬಳ್ಳಿ, ಬಳ್ಳಾರಿಯ ಹಂಪಿಗಳಲ್ಲಿ ಹೆಲಿಪೋರ್ಟ್ ನಿರ್ಮಾಣ, ರಾಜ್ಯದ ಪ್ರಮುಖ 50 ಪ್ರವಾಸಿ ತಾಣಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ, ಎರಡನೇ ಹಂತದಲ್ಲಿ ಮತ್ತೆ 50 ಹೆಲಿಪ್ಯಾಡ್ಗಳ ನಿರ್ಮಾಣದ ಕುರಿತಾಗಿ ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ದಕ್ಷಿಣ ಭಾರತಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರವಾಸಿ ಸ್ಥಳಗಳನ್ನು ಭೇಟಿ ಮಾಡಲು ಅನುಕೂಲವಾಗುವಂತೆ ಸರ್ಕ್ಯೂಟ್ ಬೋರ್ಡ್ ರಚನೆ, ನೆರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸುವ ಬಗ್ಗೆಯೂ ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಉಡಾನ್ ಯೋಜನೆಯಡಇಯಲ್ಲಿ ಸೀಪ್ಲೇನ್ಗಳ ವ್ಯವಸ್ಥೆ, ಪ್ರಮುಖ ನದಿ, ಜಲಾಶಯಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡಂತೆ ಜಲಕ್ರೀಡೆಗಳಿಗೆ ಅವಕಾಶವನ್ನು ಕಲ್ಪಿಸುವುದು ಸೇರಿದಂತೆ ಇನ್ನೂ ಅನೇಕ ರೀತಿಯ ಸೌಲಭ್ಯಗಳನ್ನು ಪ್ರವಾಸಿಗರಿಗೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.