ಬೆಂಗಳೂರು: ಅತ್ಯಂತ ಜಟಿಲ ಪ್ರಕರಣಗಳ ಸಂದರ್ಭದಲ್ಲಿಅದೆಷ್ಟೇ ಒತ್ತಡಗಳಾದರೂ, ಆ ಒತ್ತಡಗಳೆಲ್ಲವನ್ನೂ ಜಯಿಸಿ ಜನರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ಮಾಡುವಂತೆ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕರೆ ನೀಡಿದರು.
ರಾಜ್ಯದ ಪೊಲೀಸ್ ಸಿಬ್ಬಂದಿಗಳು ಹಲವಾರು ಜಟಿಲ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸುವ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಹಲವು ಪ್ರಕರಣಗಳನ್ನು ಬೇಧಿಸಲು ಅವರು ಚಾಣಾಕ್ಷರಂತೆ, ಸಾಹಸಿಗಳಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಗೆ ಇಡೀ ದೇಶದಲ್ಲಿಯೇ ಮಾದರಿ ಇಲಾಖೆ ಎಂಬ ಹೆಸರಿದೆ. ಇಂತಹ ಹೆಸರು ಪಡೆಯಬೇಕಾದರೆ ಪೊಲೀಸ್ ಇಲಾಖೆ ಬಹಳಷ್ಟು ಶ್ರಮ ಪಟ್ಟಿದೆ. ಹಲವು ಪ್ರಕರಣಗಳ ತನಿಖೆಯ ಸಂದರ್ಭದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿರುವುದು ಸಂತಸ ತಂದಿದೆ ಎಂದು ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.