ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತುಗಳು ಮತ್ತು ನಿಷೇಧಿತ ಪದಾರ್ಥಗಳ ಪರೀಕ್ಷೆ ನಡೆಸುವುದಕ್ಕೆ ಪ್ರತ್ಯೇಕ ವಿಧಿ ವಿಜ್ಞಾನ ಪ್ರಯೋಗಾಲಯಗಳನ್ನು ಆರಂಭ ಮಾಡಬೇಕು ಎಂಬುದಾಗಿ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪೊಲೀಸರು ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡ ಸಂದರ್ಭದಲ್ಲಿ ಫೀಲ್ಡ್ ಟೆಸ್ಟ್ ನಡೆಸಬೇಕು. ಎನ್ಸಿಬಿ ಮಾರ್ಗಸೂಚಿಗಳ ಪ್ರಕಾರ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದುಕೊಂಡ 72 ಗಂಟೆಗಳೊಳಗಾಗಿ ಅವುಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಬೇಕು. 15 ದಿನಗಳಲ್ಲಿಯೇ ವರದಿ ಪಡೆಯಬೇಕು ಎಂದು ನಿಯಮಗಳಿವೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂಬುದಾಗಿ ಕೋರ್ಟ್ ತಿಳಿಸಿದೆ.
ಈ ಸಂಬಂಧ ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ಪರೀಕ್ಷೆಗೆ ಕೇವಲ ಒಂದೇ ಒಂದು ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ಇದರಿಂದಾಗಿ ವರದಿ ಪಡೆಯುವಿಕೆ ತಡವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಅಜ್ಯದಲ್ಲಿ ಮಾದಕ ವಸ್ತುಗಳ ಪರೀಕ್ಷೆಗಾಗಿಯೇ ಪ್ರತ್ಯೇಕ ಪ್ರಯೋಗಾಲಯಗಳನ್ನು ತೆರೆಯುವುದಕ್ಕೆ ಗೃಹ ಇಲಾಖೆಗೆ ಮನವರಿಕೆ ಮಾಡಬೇಕು. ಈ ಆದೇಶದ ಪ್ರತಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ರವಾನಿಸುವಂತೆ ನಿರ್ದೇಶನ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.