ಮುಂಬಯಿ: ಅನಿಲ್ ದೇಶ್ಮುಖ್ ಅವರು ಸೋಮವಾರ ಮಹಾರಾಷ್ಟ್ರದ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬಯಿನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಇವರ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಮುಂಬಯಿನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರ ಪತ್ರದ ಬಗ್ಗೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ನಂತರ, ದೇಶಮುಖ್ ಅವರು ಸ್ಥಾನದಿಂದ ಕೆಳಗಿಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ದೇಶಮುಖ್ ಅವರು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ನಂತರ ದೇಶ್ಮುಖ್ ಅವರು ರಾಜ್ಯದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಪತ್ರವನ್ನು ಹಸ್ತಾಂತರಿಸಿ್ದಾರೆ ಎನ್ನಲಾಗಿದೆ.
ಬಾಂಬೆ ಹೈಕೋರ್ಟ್ನ ಆದೇಶದ ನಂತರ ಗೃಹ ಸಚಿವರಾಗಿ ಮುಂದುವರಿಯುವುದು ನೈತಿಕವಾಗಿ ಸರಿಯಲ್ಲ ಎಂದು ದೇಶಮುಖ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
— ANIL DESHMUKH (@AnilDeshmukhNCP) April 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.