ಬೆಂಗಳೂರು: ಇಂಧನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಆರ್ಥಿಕ ವೆಚ್ಚ ಕಡಿತಗೊಳಿಸಲು ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಬಳಕೆ ಮಾಡುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ.
ಗ್ಲೋಬಲ್ ಟೆಕ್ನಾಲಜಿ ಗವರ್ನನ್ಸ್ ಶೃಂಗಸಭೆ 2021 ನೇ ಅಂಗವಾಗಿ ವಿಶ್ವ ಆರ್ಥಿಕ ವೇದಿಕೆಯಿಂದ ರೂಪಿಸಲ್ಪಟ್ಟ ʼGoverning Goods on the Move’ ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ಡಿಸಿಎಂ ಡಾ ಅಶ್ವತ್ಥ ನಾರಾಯಣ್ ಅವರು, ಇಂಧನಗಳ ಪ್ರಮಾಣ ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂಧನ ಬೆಲೆಯೂ ಹೆಚ್ಚಳವಾಗುತ್ತಿದೆ. ಇದು ಸಾರಿಗೆ ವ್ಯವಸ್ಥೆಯ ಮೇಲೆ, ಪರಿಸರದ ಮೇಲೆಯೂ ವ್ಯತಿರಿಕ್ತ ಪರಿಣಾಮವನ್ನು ಬೀರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳತ್ತ ಚಿತ್ತ ಹರಿಸುವ ಅಗತ್ಯತೆ ಹೆಚ್ಚು ಅವಶ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪೂರಕ ಎಂಬಂತೆ ಸರ್ಕಾರ, ಕೈಗಾರಿಕೆಗಳು, ಆರಂಭಿಕ ಅಳವಡಿಕೆದಾರರು ಎಲೆಕ್ಟ್ರಿಕ್ ವಾಹನಗಳಿಂದ ನಿರೀಕ್ಷಿಸಿದ ಪ್ರಾಯೋಗಿಕತೆ, ಸುಸ್ಥಿರತೆ, ಸುರಕ್ಷತೆ, ಕೈಗೆಟಕುವ ಗುಣಲಕ್ಷಣಗಳನ್ನು ಒದಗಿಸುವಲ್ಲಿ ಹೆಚ್ಚು ಸಮರ್ಥವಾಗಿವೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.