ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 50% ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಯ ಹಿನ್ನೆಲೆಯಲ್ಲಿ ಮೀಸಲಿಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಈ ಹಿಂದೆ 20% ಗಳಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ಇದೀಗ ಸೋಂಕಿತರ ಪ್ರಕರಣಗಳು ದಿನೇ ದಿನೇ ಹೆಚ್ಚಗುತ್ತಲೇ ಇದ್ದು, ಈ ಹಿನ್ನೆಲೆಯಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದ 50% ಗಳಷ್ಟು ಹಾಸಿಗೆಗಳನ್ನು ಮೀಸಲಿಡುವಂತೆ ಸೂಚಿಸಲಾಗಿದೆ.
ಹಾಗೆಯೇ ಖಾಸಗಿ ಆಸ್ಪತ್ರೆಗಳು ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆಗಳನ್ನು ಪಾಲಿಸುವಂತೆಯೂ ತಿಳಿಸಿದೆ. ಇದನ್ನು ಖಚಿತ ಪಡಿಸಿಕೊಳ್ಳುವ ಕೆಲಸವನ್ನು ನೋಡಲ್ ಅಧಿಕಾರಿಗಳು ಮಾಡಬೇಕು. ಈ ಆದೇಶದಲ್ಲಿ ಆಸ್ಪತ್ರೆಗಳ ದರಪಟ್ಟಿಯನ್ನೂ ಉಲ್ಲೇಖಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸಾ ವೆಚ್ಚ ಮರುಪಾವತಿಗೆ ಸಂಬಂಧಿಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕ್ರಮ ವಹಿಸಲಿರುವುದಾಗಿಯೂ ಆದೇಶದಲ್ಲಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.