ನವದೆಹಲಿ: ಇಲ್ಲಿಯವರೆಗೆ ಕೊರೋನಾ ಲಸಿಕೆ ನೀಡುವುದರಲ್ಲಿ ಮುಂಚೂಣಿಯಲ್ಲಿದ್ದ ಅಮೆರಿಕಾವನ್ನು ಭಾರತ ಹಿಂದಕ್ಕೆ, ವಿಶ್ವದಲ್ಲಿ ಅತೀ ಕ್ಷಿಪ್ರಗತಿಯಲ್ಲಿ ಲಸಿಕೆ ನೀಡುವ ದೇಶವಾಗಿ ಹೊರ ಹೊಮ್ಮಿದೆ. ಈ ಮಹತ್ವದ ಬೆಳವಣಿಗೆಯ ಪ್ರಕಾರ, ಪ್ರತಿನಿತ್ಯ 30,93,861 ಕೋವಿಡ್ -19 ಲಸಿಕೆ ಗಳನ್ನು ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ದೈನಂದಿನ ಸರಾಸರಿ 29.98 ಲಕ್ಷ ಕೋವಿಡ್ -19 ಲಸಿಕೆ ಪ್ರಮಾಣವನ್ನು ನೀಡಲಾಗುತ್ತಿದ್ದು, ಯುಎಸ್ ವಿಶ್ವದ ಎರಡನೇ ಕ್ಷಿಪ್ರವಾಗಿ ಲಸಿಕೆ ನೀಡುವ ದೇಶವಾಗಿದೆ. ಬ್ರೆಜಿಲ್ ನಂತರದ ಸ್ಥಾನದಲ್ಲಿದೆ. ಈ ಮಧ್ಯೆ ದೇಶದಲ್ಲಿ ನಡೆಸಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣವು ಬುಧವಾರ 8.70 ಕೋಟಿ ದಾಟಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿ 13,32,130 ಕೇಂದ್ರಗಳ ಮೂಲಕ 8,70,77,474 ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 33 ಲಕ್ಷಕ್ಕೂ ಹೆಚ್ಚು ಲಸಿಕೆ ಪ್ರಮಾಣವನ್ನು ನೀಡಲಾಗಿರುವುದು ಕೂಡ ವಿಶೇಷ ಸಾಧನೆಯೇ ಆಗಿದೆ. ಒಟ್ಟಾರೆ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಮುನ್ನಡೆ ಸಾಧಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.