ಬೆಂಗಳೂರು: ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಎರಡು ನಗರಗಳನ್ನು ಅತ್ಯಾಧುನಿಕ ಸೌಲಭ್ಯಗಳುಳ್ಳ ಆಧುನಿಕ ಅವಳಿ ಜಿಲ್ಲೆಗಳನ್ನಾಗಿಸಲು ಸರಕಾರ ಪ್ರಯತ್ನಿಸುತ್ತಿದೆ. ಈ ಹಿನ್ನಲೆಯಲ್ಲಿ ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬೆಂಗಳೂರು ಅಭಿವೃದ್ಧಿಯ ಮಾದರಿಯನ್ನು ಇಟ್ಟುಕೊಂಡು ಮೇಲೆ ಸೂಚಿಸಿದ ಎರಡು ನಗರಗಳನ್ನು ಅಭಿವೃದ್ಧಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಇಲ್ಲಿನ ಮೂಲಸೌಕರ್ಯ, ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಆಕರ್ಷಕ ವಿಶಾಲ ಉದ್ಯಾನವನಗಳ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ ಮುಂತಾದ ಒಟ್ಟು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಳ್ಳುವಂತೆ ಈ ಯೋಜನೆಯನ್ನು ರೂಪಿಸಲಾಗಿದೆ.
ಈ ಅಭಿವೃದ್ಧಿ ಕಾರ್ಯಗಳು ನಿರ್ದಿಷ್ಟ ಅವಧಿಯೊಳಗೆ ಮುಗಿಯುವಂತೆ ಕ್ರಮ ಕೈಗೊಳ್ಳುವಂತೆಯೂ ಡಿಸಿಎಂ ಅಧಿಕಾರಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಟ್ಟು ಈ ಎರಡು ನಗರಗಳನ್ನು ಅಭಿವೃದ್ಧಿಪಡಿಸುವ ಯೋಜನಾ ವರದಿ ಸಲ್ಲಿಸಲು 37 ಲಕ್ಷ ರೂ.ಗಳನ್ನು ಕೊಡಲಾಗಿದೆ. ಆರೇಳು ತಿಂಗಳುಗಳಲ್ಲಿ ಈ ಯೋಜನೆ ಪೂರ್ಣವಾಗಲಿದೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.