ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಗೂಂಡಾಗಿರಿ ಹೆಚ್ಚುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಅವರ ಕಾರಿನ ಮೇಲೆ ನಿನ್ನೆ ನಡೆದ ದಾಳಿಯನ್ನು ಖಂಡಿಸಿರುವ ಅವರು, ಸೋಲಿನ ಹತಾಶೆಯಿಂದ ತೃಣಮೂಲ ಕಾಂಗ್ರೆಎಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಗೂಂಡಾಗಿರಿಯನ್ನು ಪ್ರದರ್ಶಿಸುತ್ತಿದ್ದಾರೆ. ಕೇಂದ್ರ ಸರಕಾರವು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳ ಅನುಷ್ಠಾನದಿಂದಾಗಿ ಟಿಎಂಸಿ ಸೋಲಿನ ಭೀತಿಯಿಂದಿದೆ. ಅದೇ ಕಾರಣಕ್ಕಾಗಿ ಬಾಂಬ್ ದಾಳಿ, ಕಲ್ಲೆಸೆತದಂಥ ದುಷ್ಕøತ್ಯಗಳಿಗೆ ಅವರು ಮುಂದಾಗುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.
ಈ ಮಾದರಿಯ ಟಿಎಂಸಿ ಗೂಂಡಾ ಪ್ರವೃತ್ತಿಗೆ ಪಶ್ಚಿಮ ಬಂಗಾಳದ ಮತದಾರರು ಸರಿಯಾದ ಉತ್ತರ ನೀಡಲಿದ್ದಾರೆ. ಬಿಜೆಪಿಯನ್ನು ಅಲ್ಲಿ ಅಧಿಕಾರದ ಗದ್ದುಗೆಗೆ ಏರಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.