ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ ಮೂರೂ ಕ್ಷೇತ್ರಗಳಲ್ಲಿ ಕಾರ್ಯಕರ್ತರು ವಿಶೇಷ ಶ್ರಮ ವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇದು ಪಕ್ಷದ ಗೆಲುವಿಗೆ ಪೂರಕ ಎಂದರು.
ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಷಡ್ಯಂತ್ರ ಮತ್ತು ಒಳಸಂಚು ರೂಪಿಸುತ್ತಿದೆ. ಕಾಂಗ್ರೆಸಿಗರು ಎಷ್ಟೇ ಪ್ರಯತ್ನ ಪಟ್ಟರೂ ಈ ಕ್ಷೇತ್ರಗಳಲ್ಲಿ ಸೋಲುವುದು ಖಚಿತ ಎಂದು ಅವರು ನುಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಈಶ್ವರಪ್ಪ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜ್ಯದ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದಾರೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.