ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡು ಭಾಗಗಳಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿದ್ದು ತೇವಾಂಶ ಭರಿತ ಮೋಡಗಳು ಸೃಷ್ಟಿಯಾಗಿವೆ. ಇದರಿಂದಾಗಿ ಎ.9 ರಿಂದ ಎ. 13 ರ ವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳುರು, ಕೊಡಗು ಹಾಸನ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಗುಡುಗು ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಅವರು ಹೇಳಿದ್ದಾರೆ.
ಈ ಬಾರಿಯ ಮುಂಗಾರು ಮಳೆ ಆಶಾದಾಯಕವೇ ಎಂಬುದರ ಬಗ್ಗೆ ಈ ಮಾಸಾಂತ್ಯದಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.