ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿಯೇ ರಾಜ್ಯಕ್ಕೆ ನೂತನ ಗಣಿ ನೀತಿ ಜಾರಿಯಾಗಲಿದೆ. ಈ ಸಂಬಂಧ ಈಗಾಗಲೇ ಕರಡು ನೀತಿಗಳನ್ನು ಸಿದ್ಧಗೊಳಿಸಲಾಗಿದೆ. ಈ ಸಂಬಂಧ ಜನಪ್ರತಿನಿಧಿಗಳು. ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಈ ಕರಡು ಪ್ರತಿಯನ್ನು ಅಭ್ಯಸಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆಯೂ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಈ ನೂತನ ನೀತಿಯಲ್ಲಿ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುವುದು. ಈ ಹಿನ್ನೆಲೆಯಲ್ಲಿ ಆ ಭಾಗದ ಜನಪ್ರತಿನಿಧಿಗಳು, ಉದ್ಯಮಿಗಳು ಮತ್ತು ಮರಳು ಬಳಕೆದಾರರ ಅಭಿಪ್ರಾಯವನ್ನು ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಇನ್ನು ರಾಜ್ಯದಲ್ಲಿನ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣಗಳಲ್ಲಿ ಬಿಲ್ಲು ಪಾವತಿಯ ಸಂದರ್ಭ ಮರಳಿನ ಮೌಲ್ಯವನ್ನು ಕಳೆಯಲಾಗುತ್ತದೆ. ಈನೂತನ ನೀತಿಯಲ್ಲಿ ಮರಳು ಎಲ್ಲೆಲ್ಲಿ ಮತ್ತು ಯಾವಾಗ ದೊರೆಯಬೇಕು ಎಂಬುದರ ಬಗೆಗೂ ಸ್ಪಷ್ಟನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಅದರೊಂದಿಗೆ ಬೆಂಗಳೂರು ಕೇಂದ್ರಿತವಾಗಿ ಮರಳು ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಸೇವೆಯನ್ನು ಅಳವಡಿಸಲಾಗುವುದು ಎಂದು ಅವರು ನುಡಿದಿದ್ದಾರೆ.
ನೂತನ ಗಣಿ ನೀತಿಯಲ್ಲಿ ಸರಳೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಆಡಳಿತ ಸುಧಾರಣೆ, ಆದಾಯಕ್ಕೂ ಅಧಿಕ ಪ್ರಾಶಸ್ತ್ಯ ನೀಡಲಾಗುವುದು. ಗಣಿ ಸಮಸ್ಯೆಗಳ ಆಲಿಕೆ, ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯದ 5 ಕಡೆಗಳಲ್ಲಿ ಗಣಿ ಅದಾಲತ್ ನಡೆಸಲಾಗುವುದು ಎಂದು ನಿರಾಣಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.