ಬೆಂಗಳೂರು: ಸಾರಿಗೆ ನೌಕರರು ಹಠಕ್ಕೆ ಬಿದ್ದು ಮುಷ್ಕರ ಕುಳಿತಿದ್ದಾರೆ. ಆದರೆ ಸರ್ಕಾರ ಯಾವುದೇ ಹಠಕ್ಕೆ ಬಿದ್ದಿಲ್ಲ. ಈಗಾಗಲೇ ಸಾರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಯಾರದೋ ಮಾತಿಗೆ ಬಲಿಯಾಗಿ ಸಾರಿಗೆ ನೌಕರರು ಮುಷ್ಕರ ನಡೆಸದಿರಿ. ಕರ್ತವ್ಯಕ್ಕೆ ಹಾಜರಾಗಿ ಎಂದು ನೌಕರರಲ್ಲಿ ಮನವಿ ಮಾಡಿದ್ದಾರೆ. ಕೊರೋನಾ ಸಂಕಷ್ಟದ ಅವಧಿಯಲ್ಲಿ ಸಾರಿಗೆ ಸೇವೆ ಸ್ಥಗಿತವಾಗಿದ್ದಾಗಲೂ ನೌಕರರಿಗೆ ವೇತನ ನೀಡುವ ಕೆಲಸವನ್ನು ಸರ್ಕಾರ ಮಾಡಿದೆ. ಅದರ ಜೊತೆಗೆ ಒಂಬತ್ತು ಬೇಡಿಕೆಗಳಲ್ಲಿ ಎಂಟು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಇವೆಲ್ಲವನ್ನೂ ಗಮನದಲ್ಲಿರಿಸಿಕೊಂಡು ಸಾರಿಗೆ ನೌಕರರು ಕರ್ತವ್ಯಕ್ಕೆ ಮರಳುವಂತೆ ಸೂಚಿಸಿದರು.
ಸಾರಿಗೆ ನೌಕರರಿಗೆ 6 ನೇ ವೇತನ ಆಯೋಗದಡಿಯಲ್ಲಿ ವೇತನ ನೀಡುವುದಕ್ಕೆ ಸಾಧ್ಯವಿಲ್ಲ. ಈಗಾಗಲೇ ಅವರೊಂದಿಗೆ ಹಲವು ಬಾರಿ ಇದನ್ನು ಅವರಿಗೆ ಮಾತುಕತೆಯ ಮೂಲಕ ಮನವರಿಕೆ ಮಅಡಲಾಗಿದೆ. ಆದ್ದರಿಂದ ಅವರು ಪ್ರಯಾಣಿಕರಿಗೆ ತೊಂದರೆಯಾಗದಂತೆ ಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಸಿಎಂ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.