ಪೇಶಾವರ: ಕಳೆದ ವರ್ಷ ಡಿಸೆಂಬರ್ನಲ್ಲಿ ಕೆಲವು ಸ್ಥಳೀಯ ಧರ್ಮಗುರುಗಳು ಮತ್ತು ಮೂಲಭೂತವಾದಿ ಇಸ್ಲಾಮಿಕ್ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಜನಸಮೂಹ ಹಾನಿಗೊಳಪಡಿಸಿದ ಪವಿತ್ರ ಹಿಂದೂ ದೇವಾಲಯದ ಪುನರ್ನಿರ್ಮಾಣಕ್ಕಾಗಿ ಪಾಕಿಸ್ಥಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ ಬಿಡುಗಡೆ ಮಾಡಿದೆ.
ಖೈಬರ್ ಪಖ್ತುನ್ಖ್ವಾದ ಕರಕ್ ಜಿಲ್ಲೆಯ ಟೆರ್ರಿ ಗ್ರಾಮದಲ್ಲಿ ಕಳೆದ ವರ್ಷ ಡಿಸೆಂಬರ್ 30 ರಂದು ನಾಶವಾದ ಶ್ರೀ ಪರಮಹಂಸ್ ಜಿ ಮಹಾರಾಜ್ ಅವರ ಸಮಾಧಿಯ ಪುನರ್ನಿರ್ಮಾಣಕ್ಕಾಗಿ ಪ್ರಾಂತೀಯ ಸರ್ಕಾರವು ಔಕಾಫ್ ಇಲಾಖೆಗೆ 3,48,29,000 ರೂ.ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಒಂದು ಶತಮಾನದಷ್ಟು ಹಳೆಯದಾದ ದೇವಾಲಯ ಮತ್ತು ಅದರ ಪಕ್ಕದ ‘ಸಮಾಧಿ’ ಮೇಲೆ ನಡೆದ ದಾಳಿಯು ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮುಖಂಡರಿಂದ ತೀವ್ರ ಖಂಡನೆಗೆ ಗುರಿಯಾಗಿದ್ದು, ಅದರ ಪುನರ್ನಿರ್ಮಾಣಕ್ಕೆ ಆದೇಶ ನೀಡುವಂತೆ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು.
ದೇವಾಲಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಪ್ರಾಂತೀಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.