ಬೆಂಗಳೂರು: ಏರುತ್ತಿರುವ ಕೊರೋನಾ ಸೋಂಕಿನ ಕಾರಣಕ್ಕಾಗಿ ಈಗಾಗಲೇ ನಡೆಯುತ್ತಿರುವ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ಸಿದ್ದಪಡಿಸಿಕೊಂಡಿರುವ ವೇಳಾಪಟ್ಟಿಯಂತೆ ಶಿಕ್ಷಣ ಸಂಬಂಧಪಟ್ಟ ಚಟುವಟಿಕೆಗಳು ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಬೆಂಗಳೂರಿನ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ ಯಾವೊಂದು ಬದಲಾವಣೆ, ಗೊಂದಲಗಳಿಲ್ಲದೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಮುಂದಿನ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ಇಲ್ಲವಾಗಿದೆ. ಇನ್ನೂ ತಡ ಆಗುವುದು ಬೇಡ. ಒಂದು ವೇಳೆ ತಡವಾದರೆ, ಓದು, ಪರೀಕ್ಷೆ, ತೇರ್ಗಡೆ, ಉದ್ಯೋಗ, ಮುಂದಿನ ವ್ಯಾಸಂಗದ ಚೈನ್ ಕಟ್ ಆಗಿಬಿಡುತ್ತದೆ. ಹಾಗೆ ಆಗುವುದು ಬೇಡ ಹಾಗೂ ಪರೀಕ್ಷೆ ನಂತರದ ಬೇಸಗೆ ರಜಾ ಇಲ್ಲ ಎಂದರು.
ಕಾಲೇಜಿಗೆ ಬರುವ ಎಲ್ಲಾ ವಿದ್ಯಾರ್ಥಿಗಳು ಕೊರೋನಾ ಮುಂಜಾಗೃತ ಕ್ರಮಗಳನ್ನು ಅನುಸರಿಸಲಿದ್ದಾರೆ ಈ ಬಗ್ಗೆ ಕಾಲೇಜು ಆಡಳಿತ ಕೂಡ ಗಮನ ಹರಿಸಲಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.