ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಪ್ರಕಟಿಸಿದೆ.
ಈ ಮಾರ್ಗಸೂಚಿಯ ಬಗ್ಗೆ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್ ಅವರು, ಸಭೆ ಸಮಾರಂಭಗಳನ್ನು ನಡೆಸಲು ಹೊರಡಿಸಲಾಗಿರುವ ನೂತನ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ್ದಾರೆ. ಒಳಾಂಗಣ ಮದುವೆ ಕಾರ್ಯಕ್ರಮಕ್ಕೆ 100 ಜನರಿಗೆ ಅವಕಾಶ, ಹೊರಾಂಗಣ ಮದುವೆಗೆ 200 ಜನರಿಗೆ ಭಾಗವಹಿಸುವುದಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚು ಮಂದಿ ಗುಂಪುಗೂಡುವುದಕ್ಕೂ ಅವಕಾಶ ಇಲ್ಲ. ಹಾಗೆಯೇ ಶವ ಸಂಸ್ಕಾರಕ್ಕೆ ಹಣ ಪಡೆಯುವಂತಿಲ್ಲ ಎಂಬುದಾಗಿಯೂ ಸಚಿವರು ಮಾರ್ಗಸೂಚಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಜೊತೆಗೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಹೊಟೇಲ್ಗಳನ್ನೇ ತಾತ್ಕಾಲಿಕ ನೆಲೆಯಲ್ಲಿ ಅಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕೊರೋನಾ ಲಕ್ಷಣಗಳನ್ನು ಹೊಂದಿರುವ ರೋಗಿಗಳಷ್ಟೇ ಆಸ್ಪತ್ರೆಗೆ ದಾಖಲಾಗಿ ಎಂದು ಸಚಿವರು ತಿಳಿಸಿದ್ದಾರೆ. ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ 50% ಹಾಸಿಗೆಗಳನ್ನು ಮೀಸಲಿಡುವಂತೆಯೂ ಅವರು ಮನವಿ ಮಾಡಿದ್ದಾರೆ.
ಅಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಲಾಗುವ ಕಠಿಣ ನಿಯಮಗಳ ಬಗ್ಗೆ ವಿಪಕ್ಷ ನಾಯಕರು, ಅಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.