ಬೆಂಗಳೂರು: ಸಚಿವಾಲಯದ ಸಿಬ್ಬಂದಿಗಳಿಗೆ ಕಠಿಣ ನಿಯಮ ಜಾರಿಗೊಳಿಸಲು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಚಿಂತನೆ ನಡೆಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವಾಲಯದ ಸಿಬ್ಬಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯವಾಗಿದ್ದು, ಸ್ಯಾನಿಟೈಸ್ ಮಾಡಿ ಬಳಿಕ ಬಯೋ ಮೆಟ್ರಿಕ್ ಉಪಯೋಗಿಸಲು ಸೂಚಿಸಲಾಗಿರುವುದಾಗಿ ತಿಳಿಸಿದ್ದಾರೆ. ಕೊರೋನಾ ಕಾರಣವನ್ನಿಟ್ಟುಕೊಂಡು ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡಲಾಗದು. ಹಾಗೆ ಮಾಡಿದಲ್ಲಿ ಅದರಿಂದಾಗಿ ಸಿಬ್ಬಂದಿ ಸರಿಯಾಗಿ ಕರ್ತವ್ಯ ನಿರ್ವಹಿಸಲಾರರು. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗುವುದಿಲ್ಲ. ಆದ್ದರಿಂದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಹಾಗೆಯೇ ಉಳಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಡಿ ಗ್ರೂಪ್ ನೌಕರರಿಗೆ ಸಮವಸ್ರ್ತ ವಿಚಾರಕ್ಕೆ ಸಂಬಂಧಿಸಿದಂತೆಯೂ ಪ್ರತಿಕ್ರಿಯೆ ನೀಡಿದ ಸಭಾಪತಿಗಳು, ನಾವು ಜಾರಿಗೆ ತಂದ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸತಕ್ಕದ್ದು ಎಂದು ಹೇಳಿದ್ದಾರೆ. ಸಮವಸ್ತ್ರ ಧರಿಸಿದಲ್ಲಿ ಅವರಲ್ಲಿ ಶಿಸ್ತು ಹೆಚ್ಚಾಗುತ್ತದೆ. ನೌಕರರು ಬಿಳಿ ಬಣ್ಣ ಬೇಡ ಎಂದು ನೌಕರರು ಬೇಡಿಕೆ ಇಟ್ಟಿದ್ದು, ಬಣ್ಣ ಬದಲಾವಣೆ ಅಸಾಧ್ಯ. ಮಹಿಳೆಯರಿಗೆ ಸೀರೆಯ ಹೊರತಾಗಿ ಚೂಡಿದಾರ ಧರಿಸುವುದಕ್ಕೂ ಅವಕಾಶ ನೀಡಲಾಗಿದೆ. ಈ ಸಮವಸ್ತ್ರಗಳನ್ನು ಸರ್ಕಾರಿ ಮಳಿಗೆಗಳಿಂದಲೇ ಖರೀದಿ ಮಾಡಲಾಗುವುದು ಎಂದು ಹೊರಟ್ಟಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.