ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಗಳ ತೆರವಾಗಿರುವ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಇಂದು ಚುನಾವಣಾ ಕಣದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.
ಕೊರೋನಾ ಸೋಂಕು ವ್ಯಾಪಿಸುವ ಆತಂಕದ ನಡುವೆಯೇ ಉಪಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಯಲ್ಲಿ ಮತದಾನದ ಅವಧಿಯನ್ನು ಹೆಚ್ಚಿಸಲಾಗಿದೆ. ಬೆಳಗ್ಗೆ 7 ರಿಂದ ತೊಡಗಿದಂತೆ ಸಂಜೆ 7 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡೇ ಈ ಚುನಾವಣೆ ನಡೆಸಲಾಗುತ್ತಿದೆ ಎಂದು ಆಯೋಗ ಮಾಹಿತಿ ನೀಡಿದೆ.
ಇನ್ನು ಬಸವ ಕಲ್ಯಾಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮಾಲಾ, ಬಿಜೆಪಿಯಿಂದ ಶರಣು ಸಲಗರ, ಜೆಡಿಎಸ್ನಿಂದ ಸಯ್ಯದ್ ಯಸ್ರಬ್ ಆಲಿ ಖಾದ್ರಿ, ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಕಣದಲ್ಲಿದ್ದಾರೆ. ಮಸ್ಕಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್ನಿಂದ ಬಸವನಗೌಡ ಪಾಟೀಲ ತುರ್ವಿಹಾಳ ಕಣದಲ್ಲಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದಿಂದ ಕೇಂದ್ರ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಲ ಸುರೇಶ್ ಅಂಗಡಿ, ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಇದ್ದು, ಇವರಲ್ಲಿ ಜನರು ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.