ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ರಾಜ್ಯ ಸರ್ಕಾರ, ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮಿಡಿಸ್ವಿರ್ ಔಷಧಿಯ ಕೃತಕ ಅಭಾವ, ಕಾಳಸಂತೆಯಲ್ಲಿ ಮಾರಾಟ ಮೊದಲಾದ ಅಕ್ರಮಗಳನ್ನು ನಡೆಸಿದಲ್ಲಿ, ಅಂತಹವರ ವಿರುದ್ಧ ಕಠಿಣ ಕ್ರಮ, ಬಂಧನದ ಎಚ್ಚರಿಕೆಯನ್ನು ನೀಡಿದೆ.
ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ರೆಮಿಡಿಸ್ವಿರ್ ಪ್ರಾಣ ಉಳಿಸಲು ಇರುವುದಕ್ಕೆ ಇರುವ ಅವಕಾಶ. ಇದನ್ನು ಕಾಳಸಂತೆಯಲ್ಲಿ ಮಾರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದೆ. ಇದರ ಅಭಾವ ಸೃಷ್ಟಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಜರುಗಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಕುರಿತು ಈಗಾಗಲೇ ರೆಮಿಡಿಸ್ವಿರ್ ಔಷಧ ದಾಸ್ತಾನುದಾರರು ಯಾರು, ವಿತರಕರು ಯಾರು?, ಬೇಡಿಕೆ ಸಲ್ಲಿಸುವವರು ಯಾರು?, ದಾಸ್ತನು ಪ್ರದೇಶಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದಾಗಿ ರೆಮಿಡಿಸ್ವಿರ್ ದಾಸ್ತಾನಿದೆಯೋ, ಇಲ್ಲವೋ, ಕೃತಕ ಅಭಾವ ಹೇಗೆ ಸೃಷ್ಟಿಯಾಗುತ್ತದೆ, ಅದನ್ನು ಸೃಷ್ಟಿಸುವವರು ಯಾರು ಎಂಬ ವಿಚಾರಗಳನ್ನು ಪತ್ತೆ ಹಚ್ಚುವುದು ಸುಲಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಜೊತೆಗೆ ನಿಗದಿತ ದರಕ್ಕಿಂತ ಎಚ್ಚು ದರಕ್ಕೆ ಔಷಧಗಳನ್ನು ಮಾರಾಟ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.