ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಣ, ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಲಭ್ಯವಿರುವ ಹಾಸಿಗೆ, ಔಷಧ, ಆಂಬ್ಯುಲೆನ್ಸ್, ಆಕ್ಸಿಜನ್ ವ್ಯವಸ್ಥೆ ಮೊದಲಾದ ವಿಚಾರಗಳ ಬಗ್ಗೆ ಇಂದೇ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ರಾಜ್ಯದಲ್ಲಿ ಕೊರೋನಾ ವೇಗವಾಗಿ ಹರಡುತ್ತಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್ ಈ ಆದೇಶವನ್ನು ಹೊರಡಿಸಿದೆ. ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಹೋಗುತ್ತಿದೆ. ನಿನ್ನೆಯಷ್ಟೇ ರಾಜ್ಯದಲ್ಲಿ ಸುಮಾರು 14 ಕ್ಕೂ ಅಧಿಕ ಜನರಿಗೆ ಕೊರೋನಾ ಸೋಂಕು ತಗುಲಿದೆ. ಕೇವಲ ಬೆಂಗಳೂರಿನಲ್ಲಿಯೇ 10,497 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.