ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ, ಅದರ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಅಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಸಿದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಅನುಪಸ್ಥಿತಿಯಲ್ಲಿ ಈ ಸಬೆ ನಡೆದಿದೆ. ಆಸ್ಪತ್ರೆಗಳಲ್ಲ ಬೆಡ್ ಗಳ ಲಭ್ಯತೆ, ಐಸಿಯುಗಳ ಲಭ್ಯತೆ, ಔಷಧಗಳು, ಆಕ್ಸಿಜನ್ ಪೂರೈಕೆ ಸೇರಿದಂತೆ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ರಾಜ್ಯಪಾಲರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ಮೊನ್ನೆಯಷ್ಟೇ ಸಚಿವ ಡಾ ಕೆ ಸುಧಾಕರ್ ಅವರು ರಾಜ್ಯಪಾಲರನ್ನು ಭೆಟಿಯಾಗಿ ಸರ್ಕಾರ ಮಾಡಿಕೊಂಡಿರುವ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು. ಅದಾದ ಬೆನ್ನಲ್ಲೇ ರಾಜ್ಯಪಾಲರು ಅಧಿಕಅರಿಗಳ ಜೊತೆಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿ ಕುಮಾರ್, ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಇ ವಿ ರಮಣ್ ರೆಡ್ಡಿ, ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಭಾಗವಹಿಸಿ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಆಸ್ಪತ್ರೆಗಳಲ್ಲಿ ಸಾಕಷ್ಟು ಅಮ್ಲಜನಕ ಪೂರೈಕೆಗೆ ಕ್ರಮ, ಔಷಧಗಳು ಮತ್ತು ಹಾಸಿಗೆಗಳ ಲಭ್ಯತೆ ಕುರಿತಾಗಿಯೂ ಗಮನ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.