ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯ ಮೇಲೆ ನಡೆದ ಗುಂಡಿನ ದಾಳಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಖಂಡಿಸಿದ್ದು, ಸೋಲಿನ ಭೀತಿಯಿಂದ ಟಿಎಂಸಿ ಇಂಥ ದುಷ್ಕೃತ್ಯಗಳಿಗೆ ಮುಂದಾಗುತ್ತಿದೆ ಎಂದು ತಿಳಿಸಿದ್ದಾರೆ.
ಸೋಲಿನ ಭೀತಿಯಿಂದ ಹತಾಶೆಗೊಂಡ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಪ್ರೇರಣೆಯಿಂದ ಮಾಲ್ದಾದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಗುಂಡಿನ ದಾಳಿ ನಡೆದಿದೆ. ಪಶ್ಚಿಮ ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಹದಗೆಟ್ಟಿರುವುದನ್ನು ಇದು ಪ್ರತಿಬಿಂಬಿಸುತ್ತದೆ. ಚುನಾವಣಾ ಫಲಿತಾಂಶ ತಮ್ಮ ವಿರುದ್ಧ ಬರಲಿದೆ ಎಂದು ಸ್ಪಷ್ಟಗೊಂಡ ಬಳಿಕ ಟಿಎಂಸಿ ಮುಖಂಡರು ಇಂಥ ದುಷ್ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆದರೆ, ಹಿಂಸೆಯ ರಾಜಕೀಯದಿಂದ ಗೆಲುವು ಸಾಧ್ಯವಿಲ್ಲ. ಪ್ರಧಾನಿಗ ನರೇಂದ್ರ ಮೋದಿ ಅವರ ಅಭಿವೃದ್ಧಿಪರ ಚಿಂತನೆಗಳನ್ನು ಬೆಂಬಲಿಸುವುದನ್ನು ಮತದಾರರು ತಮ್ಮ ಅಮೂಲ್ಯ ಮತಗಳನ್ನು ಬಿಜೆಪಿಗೆ ನೀಡುವ ಮೂಲಕ ಸ್ಪಷ್ಟಪಡಿಸಲಿದ್ದಾರೆ ಎಂಬುದಾಗಿ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.