ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಅಭಾವ ಉಂಟಾಗುವ ಭೀತಿ ಇದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ದ್ಯತೆ ನೀಡಿ ಆಕ್ಸಿಜನ್ ಪೂರೈಕೆ ಮಾಡುವಂತೆ ರಾಜ್ಯ ಸರ್ಕಾರ ಪೂರೈಕೆದಾರರಿಗೆ ಸೂಚಿಸಿದೆ.
ಈ ಸಂಬಂಧ ಸಚಿವ ಡಾ ಕೆ ಸುಧಾಕರ್, ಜಗದೀಶ್ ಶೆಟ್ಟರ್, ಸಂಸದ ತೇಜಸ್ವಿ ಸೂರ್ಯ ಅವರು ಆಕ್ಸಿಜನ್ ಪೂರೈಕೆದಾರರ ಜೊತೆಗೆ ಸಭೆ ನಡೆಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಕೊರತೆ ಎದುರಾಗುತ್ತಿದೆ. ಈ ಭೀತಿಯನ್ನು ನಿವಾರಣೆ ಮಾಡುವ ಸಲುವಾಗಿ ಈ ಸಭೆ ನಡೆಸಲಾಗಿದೆ. ಸದ್ಯ ರಾಜ್ಯಕ್ಕೆ ಅಗತ್ಯವಾಗುವ ಪ್ರಮಾಣದ ಆಮ್ಲಜನಕ ರಾಜ್ಯದಲ್ಲಿಯೇ ಉತ್ಪಾದನೆಯಾಗುತ್ತಿದೆ. ಸಿಲಿಂಡರ್ಗಳ ಕೊರತೆ ಇದ್ದು, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರಕ್ಕೆ ತಲುಪುವ ಆಮ್ಲಜನಕವನ್ನು ಸರಿಯಾದ ಪ್ರಮಾಣದಲ್ಲಿ ಆಸ್ಪತ್ರೆಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸಹ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಹಾಗೆಯೇ ಆಲ್ಮಜನಕ ಸಿಲಿಂಡರ್ಗಳನ್ನು ಉತ್ಪದನೆ ಮಾಡುವವರ ಸಮಸ್ಯೆಗಳನ್ನೂ ಆಲಿಸಲಾಗಿದೆ. ಜನರ ಆರೋಗ್ಯ ರಕ್ಷಣೆ ಮೊದಲ ಆದ್ಯತೆಯಾಗಿದ್ದು, ಆಸ್ಪತ್ರೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡಬೇಕು. ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆ ಕಡಿಮೆ ಮಾಡುವಂತೆಯೂ ಅವರು ಸೂಚಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ತಕ್ಕಷ್ಟು ಮಟ್ಟಿನಲ್ಲಿ ಅಮ್ಲಜನಕ ಉತ್ಪಾದನೆ ಮಾಡಬೇಕು ಎಂದು ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.