ಪುತ್ತೂರು : ಬಿರುಮಲೆ ಬೆಟ್ಟ ಅಭಿವೃದ್ಧಿಗಾಗಿ 3 ಕೋಟಿ ರೂ. ಬಿಡುಗಡೆಗೊಂಡಿದ್ದು, ಮೂಲಭೂತ ಸೌಕರ್ಯ ಅಭಿವೃದ್ಧಿಯೊಂದಿಗೆ ಮೇ 3ರಂದು ಬಿರುಮಲೋತ್ಸವ ನಡೆಸಲು ಬಿರುಮಲೆ ಬೆಟ್ಟ ಅಭಿವೃದ್ಧಿ ಸಮಿತಿ ನಿರ್ಣಯ ಕೈಗೊಂಡಿತು.ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ ಅಧ್ಯಕ್ಷತೆಯಲ್ಲಿ ಭಾನುವಾರ ಬಿರುಮಲೆ ಬೆಟ್ಟದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಪುರಸಭಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಮಾತನಾಡಿ, ಬಿರುಮಲೆ ಬೆಟ್ಟ ಜನಾಕರ್ಷಣೆಯ ಕೇಂದ್ರವಾಗಬೇಕು. ಶಾಸಕರ ಪ್ರಯತ್ನದ ಫಲವಾಗಿ ಬಿರುಮಲೆ ಬೆಟ್ಟ ಅಭಿವೃದ್ಧಿಗೆ ನಬಾರ್ಡ್ನಿಂದ 3 ಕೋಟಿ ರೂ. ಅನುದಾನ ಮಂಜೂರಾಗಿದೆ. ಬಿರುಮಲೋತ್ಸವ ನಡೆಸುವ ಮೊದಲು ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಇದನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದರು. ಬಿರುಮಲೋತ್ಸವವನ್ನು ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಬೇಕು. ಉತ್ಸವಕ್ಕೆ ಬೇಕಾಗಿರುವ ವ್ಯವಸ್ಥೆಗಾಗಿ ಸ್ಥಳೀಯ ಸಾರ್ವಜನಿಕರ ಸಲಹೆ, ಸಹಕಾರ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ನಗರಸಭಾ ಸ್ಥಳೀಯ ಸದಸ್ಯೆ ದೀಕ್ಷಾ ಪೈ, ಬಿರುಮಲೆ ಬೆಟ್ಟ ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರೊ.ದತ್ತಾತ್ರೇಯ ರಾವ್, ಮುರಳಿ ಮನೋಹರ ಶೆಟ್ಟಿ, ದೇವದಾಸ್ ಆಳ್ವ, ಜಯರಾಮ ಬಲ್ಯಾಯ, ರಾಮಕೃಷ್ಣ ಪೆರುವಾಜೆ, ಬಿರುಮಲೆ ಯುವಕ ಮಂಡಲದ ಅಧ್ಯಕ್ಷ ನಿತಿನ್ ಪಕ್ಕಳ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ದಯಾನಂದ ಪಿ ಮೊದಲಾದವರು ಉಪಸ್ಥಿತರಿದ್ದರು. ಬಿರುಮಲೆ ಬೆಟ್ಟ ಅಭಿವೃದ್ಧಿ ಸಮಿತಿಯ ಕೋಶಾಧಿಕಾರಿ ಎಂ.ಸುಬ್ರಾಯ ಅಮ್ಮಣ್ಣಾಯ ಸ್ವಾಗತಿಸಿ, ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.