ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಸಿಜೆ ಪೀಠ ನೌಕರರ ಸಂಘಕ್ಕೆ ನೊಟೀಸ್ ನೀಡಿದೆ.
ಕೊರೋನಾ ಸಾಂಕ್ರಾಮಿಕ ಸಂಕಷ್ಟದ ಅವಧಿಯಲ್ಲಿ ಹೀಗೆ ಮುಷ್ಕರ ನಡೆಸುವುದು ಸರಿಯಲ್ಲ. ಆದ್ದರಿಂದ ಮುಷ್ಕರ ನಿಲ್ಲಿಸಿ ಬಸ್ಸುಗಳನ್ನು ಓಡಿಸುವಂತೆ ಹೈಕೋರ್ಟ್ ತನ್ನ ಆದೇಶದಲ್ಲಿ ಸೂಚಿಸಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಇಲಾಖೆಯ ನಾಲ್ಕೂ ವಿಭಾಗಗಳ ನೌಕರರಿಗೆ ಈ ಆದೇಶವನ್ನು ನೀಡಲಾಗಿದೆ.
ಕಳೆ ಕೆಲ ದಿನಗಳಿಂದ ರಾಜ್ಯದ ಸಾರಿಗೆ ನೌಕರರು ತಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸುತ್ತಿಲ್ಲ ಎಂಬ ವಿಚಾರವನ್ನಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ. ಕೊರೋನಾ ಸಂಕಷ್ಟದಿಂದಾಗಿ ಕಳೆದೊಂದು ವರ್ಷಗಳಿಂದೀಚೆಗೆ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಇಂತಹ ಕಠಿಣ ಪರಿಸ್ಥಿತಿಯಲ್ಲಿ ನೌಕರರು ಸಹ ಮುಷ್ಕರ ನಿರತರಾಗಿದ್ದರು. ಇದರಿಂದಾಗಿ ಸಾರಿಗೆ ಇಲಾಖೆ ಮತ್ತಷ್ಟು ಆರ್ಥಿಕ ನಷ್ಟಕ್ಕೆ ತುತ್ತಾಗಿತ್ತು. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ಕಠಿಣ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ. ಮುಷ್ಕರ ಕೈಬಿಟ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.