ಬೆಂಗಳೂರು: ಮಾನವ ವನ್ಯಜೀವಿ ಸಂಘರ್ಷ ದಿಂದ ಹಸು, ಎಮ್ಮೆ, ಕೋಣ ಮೃತಪಟ್ಟಲ್ಲಿ ಅವುಗಳ ಮಾಲೀಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರ ಹಣವನ್ನು 10 ಸಾವಿರ ದಿಂದ 75 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆಯಾದಲ್ಲಿ ತಕ್ಷಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು 20 ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಲಾಗಿದೆ. ಆನಂತರ ಸ್ಥಳೀಯ ಪಶುವೈದ್ಯಾಧಿಕಾರಿಗಳು ಮೃತಪಟ್ಟ ಸಾಕುಪ್ರಾಣಿಯನ್ನು ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ಬಳಿಕ ಉಳಿದ ಮೊತ್ತ ( ಗರಿಷ್ಟ ರೂ 75000-00 ಮಿತಿಗೆ ಒಳಪಟ್ಟು ) ಪಾವತಿಯಾಗಲಿದೆ ಎಂದು ಲಿಂಬಾವಳಿ ತಿಳಿಸಿದ್ದಾರೆ.
ಇದರ ಜೊತೆ ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ ರೂ. 5000 ಪರಿಹಾರಧನವನ್ನು ರೂ. 10 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಆದೇಶದ ಮೂಲಕ ಸರ್ಕಾರ ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರ ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.