ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ನೂತನ ಕೊರೋನಾ ಮಾರ್ಗಸೂಚಿಗಳಿಂದ ಕೊರೋನಾ ಚೈನ್ ಲಿಂಕ್ ತಪ್ಪಿಸಲು ಸಾಧ್ಯವಿದ್ದು, ಮುಂದಿನ ಎರಡರಿಂದ ಮೂರು ತಿಂಗಳಿನಲ್ಲಿ ಒರೋನಾ ಸೋಂಕು ವ್ಯಾಪಿಸುವ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ವ್ಯಕ್ತಪಡಿಸಿದ್ದಾರೆ.
ಕೊರೋನಾ ಬಗ್ಗೆ ಭಯಪಡುವುದಲ್ಲ. ಬದಲು ಜನರು ಹೆಚ್ಚಿನ ಎಚ್ಚರಿಕೆಗಳನ್ನು ತೆಗೆದುಕೊಂಡು ಅತ್ಯಂತ ಧೈರ್ಯದಿಂದ ಎದುರಿಸಬೇಕಾಗಿದೆ. ಸೋಂಕು ತಗುಲಿದ ಪ್ರತಿಯೊಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವ ಅಗತ್ಯತೆ ಇಲ್ಲ. ಬದಲಾಗಿ ಗಂಭೀರ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳನ್ನು ಹೊಂದಿರುವವರು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು. ಈ ಸಂಬಂಧ ಸಂಜೆ ವೇಳೆಗೆ ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಕ್ಸಿಜನ್ ಹಾಗೂ ರೆಮಿಡಿಸಿವಿರ್ ಲಭ್ಯತೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಶ್ರೀ @RAshokaBJP ಹಾಗೂ ಬೆಂಗಳೂರು ದಕ್ಷಿಣ ಸಂಸದ ಶ್ರೀ @Tejasvi_Surya ಅವರೊಂದಿಗೆ ಸಮಾಲೋಚನೆ ನಡೆಸಲಾಯಿತು.
ಪ್ರತಿಯೊಬ್ಬ ಕೊರೊನಾ ಸೋಂಕಿತ ವ್ಯಕ್ತಿಗೂ ಸೂಕ್ತ ಚಿಕಿತ್ಸೆ ಒದಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.
— Dr Sudhakar K (@DrSudhakar_) April 21, 2021
ಬೆಂಗಳೂರಿನಲ್ಲಿರುವ ಆಕ್ಸಿಜನ್ ಸಮಸ್ಯೆ, ರೆಮ್ಡೆಸಿವಿರ್ ಲಭ್ಯತೆ, ಪೂರೈಕೆಗೆ ಸಂಬಂಧಿಸದಂತೆ ಸಮಾಲೋಚನೆ ನಡೆಸಲಾಗಿದ್ದು, ಪ್ರತಿಯೊಬ್ಬ ಸೋಂಕಿತ ವ್ಯಕ್ತಿಗೂ ಸೂಕ್ತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.