ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸದೇ ಹೋದಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿ ಮಾಡುವ ಅನಿವಾರ್ಯತೆ ಸರ್ಕಾರಕ್ಕೆ ಎದುರಾಗುತ್ತದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಮಾರಣಾಂತಿಕ ಕೊರೋನಾ ಸೋಂಕಿನ ಸರಪಳಿಯನ್ನು ಮುರಿಯುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಆದಷ್ಟು ಮಟ್ಟಿಗೆ ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಕೇವಲ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ಹೊರಗೆ ಬರಬೇಕು. ಜೊತೆಗೆ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು. 14 ದಿನಗಳಲ್ಲಿ ಸೋಂಕಿನ ಸರಪಳಿ ಮುರಿದು ಬಿದ್ದಲ್ಲಿ ಮಾತ್ರವೇ ಮುಂದಿನ ಹಂತದ ಕಠಿಣ ಕ್ರಮಗಳಿಂದ ಪಾರಾಗಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿ ಮೃತಪಟ್ಟವರ ಅಂತ್ಯಕ್ರಿಯೆಗಾಗಿ ನಗರದ ನಾಲ್ಕೈದು ಕಡೆಗಳಲ್ಲಿ ಜಾಗಗಳನ್ನು ಗುರುತು ಮಾಡಲಾಗಿದೆ. ಇಂತಹ ವ್ಯವಸ್ಥೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನಿವಾರ್ಯವಾದರೆ ಸರ್ಕಾರ ಅದಕ್ಕೂ ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.